|

ಕುಷ್ಟಗಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊಪ್ಪಳ.13.ಜೂನ್.26: ಕುಷ್ಟಗಿ ಪುರಸಭೆ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 (ನಗರ) ಅಡಿ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ ಅಡಿಯಲ್ಲಿ 4 ಯೋಜನೆಯನ್ನು ಜಾರಿಗೊಳಿಸಿದ್ದು, ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿರುವ ಅರ್ಹ ಹಾಗೂ ಆಸಕ್ತಿ ಇರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಸೇವಾ ಕೇಂದ್ರದಲ್ಲಿ ಅಥವಾ ತಾವೇ ಖುದ್ದಾಗಿ ವೆಬ್‌ಸೈಟ್ URL://pmayyrban.gov.in ನಲ್ಲಿ ಜೂನ್ 30ರ ವರೆಗೆ ಅರ್ಜಿ ಹಾಗೂ ದಾಖಲೆ ಸಲ್ಲಿಸಬಹುದಾಗಿದೆ. ಇದುವರೆಗೆ ಅರ್ಜಿ ಸಲ್ಲಿಸದೇ ಇರುವ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಪುರಸಭೆ ಕಾರ್ಯಾಲಯದ ಆಶ್ರಯ ವಿಭಾಗದಿಂದ ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಮತ್ತು ಕುಷ್ಟಗಿ ಪುರಸಭೆಯ ಆಡಳಿತಾಧಿಕಾರಿಗಳು ಆಗಿರುವ ಕೊಪ್ಪಳ ಸಹಾಯಕ ಆಯುಕ್ತರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *