ಕೃಷಿ ಇಲಾಖೆಯಿಂದ ಪಿಎಮ್‌ಎಫ್‌ಎಮ್‌ಇ ಯೋಜನೆಯ ಕಾರ್ಯಗಾರ ಯಶಸ್ವಿರಾಯಚೂರು

ರಾಯಚೂರು.31.ಜುಲೈ 25: ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ ಅಂಗವಾಗಿ ಜಿಲ್ಲಾಮಟ್ಟದ ಅರಿವು ಮೂಡಿಸುವ ಕಾರ್ಯಾಗಾರವು ಜುಲೈ 30ರಂದು ನಡೆಯಿತು.

ಇಲ್ಲಿನ ಕೃಷಿ ಇಲಾಖೆಯಿಂದ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ರೈತರು ಪಿಎಮ್‌ಎಫ್‌ಎಮ್‌ಇ ಯೋಜನೆಯ ಫಲಾನುಭವಿಗಳು, ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು, ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮತ್ತು ರಾಷ್ಟೀಯ ನಗರ ಜೀವನೋಪಾಯ ಅಭಿಯಾನದ ಫಲಾನುಭವಿಗಳು ಹಾಗೂ ನವೋದ್ಯಮಿಗಳು ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಕೆಪೆಕ್ ಸಂಸ್ಥೆಯ ರಾಜ್ಯ ಮಟ್ಟದ ಅಧಿಕಾರಿಗಳು ಭಾಗವಹಿಸಿ ಪಿಎಮ್‌ಎಫ್‌ಎಮ್‌ಇ ಯೋಜನೆಯ ಸೌಲಭ್ಯವನ್ನು ಪಡೆಯಲು ಇರುವಂತಹ ಮಾನದಂಡಗಳ ಕುರಿತು ಮಾಹಿತಿ ಒದಗಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಈ ಯೋಜನೆಯಡಿ ಸಾಲ-ಸೌಲಭ್ಯದ ಕುರಿತು ಮಾಹಿತಿ ನೀಡಿದರು.

ಆಹಾರ ಸಂಸ್ಕರಣೆಯ ಕುರಿತಾಗಿ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರು ಆಹಾರ ಸಂಸ್ಕರಣೆಯ ಮತ್ತು ತಮ್ಮಲ್ಲಿರುವ ಸೌಲಭ್ಯಗಳ ಕುರಿತಾಗಿ ರೈತರಿಗೆ ಮಾಹಿತಿ ನೀಡಿದರು. ಸೆಲ್ಲೊ ಸಂಸ್ಥೆಯ ಪ್ರತಿನಿಧಿಗಳು ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಯೋಜನೆಯ ಫಲಾನುಭವಿ ರೈತರಾದ ಶ್ರೀಮತಿ ಈರಮ್ಮ ಅವರು ಕಸೆ ಕ್ಯಾಂಪ್ ಮತ್ತು ಮಹಮ್ಮದ್ ಇಸ್ಮಾಯಿಲ್ ರಾಯಚೂರು ಅವರು ಈ ಯೋಜನೆಯಿಂದ ತಾವು ಪಡೆದಿರುವಂತ ಸಹಾಯಧನ ಮತ್ತು ತಮ್ಮ ಉತ್ಪನ್ನಗಳ ಹಾಗೂ ಆದಾಯದ ಕುರಿತು ವೇದಿಕೆಯಲ್ಲಿ ಅನಿಸಿಕೆ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಂಟಿ ಕೃಷಿ ನಿರ್ದೇಶಕರಾದ ಪ್ರಕಾಶ್ ಚಾವ್ಹಾಣ್ ಅವರು ಮಾತನಾಡಿ, ಈ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು 135 ರೈತ ಫಲಾನುಭವಿಗಳು ಸೌಲಭ್ಯ ಪಡೆದಿರುವುದಾಗಿ ಮತ್ತು ಇದರಿಂದ ಉತ್ತಮ ಜೀವನ ನಿರ್ವಹಣೆ ಮಾಡುತ್ತಿರುವುದಾಗಿ ಹಾಗೂ ಇನ್ನೂ ಹೆಚ್ಚಿನ ರೈತರು ಈ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾಗಿ ತಿಳಿಸಿದರು.
ಕಾರ್ಯಾಗಾರದಲ್ಲಿ ಯೋಜನೆಯ ಸಹಾಯಧನ ಸೌಲಭ್ಯ ಪಡೆದಂತಹ ಫಲಾನುಭವಿಗಳು ತಮ್ಮ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಕೆಪೆಕ್ ಸಂಸ್ಥೆಯ ಅಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಕೌಶಲ್ಯಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು, ನಬಾರ್ಡ್ ಮುಖ್ಯಸ್ಥರು, ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ರಾಯಚೂರು ವಿಭಾಗದ ಉಪ ಕೃಷಿ ನಿರ್ದೇಶಕರು, ಲಿಂಗಸುಗೂರು ವಿಭಾಗದ ಉಪ ಕೃಷಿ ನಿರ್ದೇಶಕರು, ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ವಿಜ್ಞಾನಿಗಳು, ಉಪ ನಿರ್ದೇಶಕರು-ತೋಟಗಾರಿಕೆ ಇಲಾಖೆ ಮತ್ತು ಪಶು ಸಂಗೋಪನಾ ಇಲಾಖೆ,  ಸಂಸ್ಥೆಯ ಪ್ರತಿನಿಧಿಗಳು, ತಾಲೂಕಿನ ಕೃಷಿ ಇಲಾಖೆಯ ಎಲ್ಲಾ ಅಧಿಕಾರಿಗಳು, ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

prajaprabhat

Recent Posts

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ…

4 hours ago

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.

ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…

4 hours ago

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…

4 hours ago

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್

ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…

4 hours ago

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…

4 hours ago

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…

5 hours ago