ಕೃಷಿ ಇಲಾಖೆ ನೇಮಕಾತಿ, ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್‌ಡೇಟ್‌

ಬೆಂಗಳೂರು.06.ಫೆಬ್ರವರಿ.25:- ರಾಜ್ಯದಲ್ಲಿ ಖಾಲಿಯಿರುವ ಕೃಷಿ ಇಲಾಖೆ ಅಧಿಕಾರಿಗಳು ಕರ್ಣಾಟಕ ಲೋಕಸೇವಾ ಆಯೋಗ ಅರ್ಜಿ ಹ್ವಾನಿಸ್ಲಾಗಿತು.

ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಕುರಿತು ಅಪ್‌ಡೇಡ್ ನೀಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಾಗ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ಮಾಡುವಂತೆ ಅಭ್ಯರ್ಥಿಗಳು ಕೋರಿದ್ದರು.

ಈಗ ಈ ಕುರಿತು ರಮಣದೀಪ್ ಚೌಧರಿ, ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಅರ್ಜಿ ಸಲ್ಲಿಕೆ ಮಾಡುವ ಕಾಲಾವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಉಳಿದಂತೆ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಪ್ರಕಟಣೆಯಲ್ಲಿ ಕೆಪಿಎಸ್‌ಸಿ ಆಯೋಗವು ದಿನಾಂಕ 20-0-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 03-01-2025 ರಿಂದ 01-02-2025 ರವರೆಗೆ ನಿಗದಿಪಡಿಸಲಾಗಿತ್ತು.

ಆದರೆ ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾಗುತ್ತಿದ್ದು ಅರ್ಜಿ ಸಲ್ಲಿಸಲುವ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿರುತ್ತಾರೆ, ಆದ್ದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕಗಳನ್ನು 05-02-2025 ರಿಂದ 15-02-2025ರವರೆಗೆ ವಿಸ್ತರಿಸಿದೆ ಎಂದು ಹೇಳಿದ್ದಾರೆ.


ಮುಂದುವರೆದು, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದಿನಾಂಕ 20-09-2024ರ ಅಧಿಸೂಚನೆಯನ್ನು ನೋಡಬಹುದಾಗಿದೆ ಎಂದು ತಿಳಿಸಲಾಗಿದೆ.

👉ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಮನವಿಗಳನ್ನು ತಿರಸ್ಕರಿಸಲಾಗುತ್ತದೆ.

👉ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದ್ದು.

*👉ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ, ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ ಸಹಿ/ ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ನಂತರ ಶುಲ್ಕವನ್ನು ಪಾವತಿಸಬೇಕು.

👉ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 38 ವರ್ಷಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ 41 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷಗಳು.

ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಆಹ್ವಾನ ನೀಡಲಾಗಿದೆ

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

4 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

4 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

4 hours ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

4 hours ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

4 hours ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

4 hours ago