22ಡಿ.ಜಿಲ್ಲಾ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ ಜಿಲ್ಲಾ ಮಟ್ಟದ ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
22 ಡಿ: ಬೀದರ್ 2024-25ನೇ ಸಾಲಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆಗೈದ ರೈತ, ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿಲು ಕೋರಿದೆ ಮತ್ತು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 31-12-2024 ರ ಸಂಜೆ 5.30 ರೊಳಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಸಲ್ಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ಸಹಾಯಕ ಕೃಷಿ ನಿರ್ದೆಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಅಸಕ್ತಿ ಇರುವವರು ತಮ್ಮ ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೆಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.