ಕೃಷಿ ಪ್ರಶಸ್ತಿ ಕಾರ್ಯಕ್ರಮ: ಮುಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ. 25: ಕೃಷಿ ಇಲಾಖೆಯಿಂದ 2025-26 ನೇ ಸಾಲಿನ ಕೃಷಿ ಪ್ರಶಸ್ತಿ ಕಾರ್ಯಕ್ರಮದಡಿ ಮುಂಗಾರು ಹಂಗಾಮಿನ ಬೆಳೆ ಸ್ಪಧೆðಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಕೃಷಿ ಪ್ರಶಸ್ತಿ ಕಾರ್ಯಕ್ರಮವು ಚಾಲ್ತಿ ಯೋಜನೆಯಾಗಿದ್ದು, ಸರ್ಕಾರಿ ಆದೇಶದನ್ವಯ 2025-26ನೇ ಸಾಲಿನಲ್ಲಿಯೂ ಮುಂದುವರಿಸಲಾಗಿದ್ದು, ಕೃಷಿ ಪ್ರಶಸ್ತಿ ಮಾರ್ಗಸೂಚಿಯ ಕೆಲವು ಮಾನದಂಡಗಳನ್ನು ಪರಿಷ್ಕರಿಸಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುವುದು. K-Kisan Portal ರಡಿ Citizen Login ಅಥವಾ  RSK Login   ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ /ನಾಗರಿಕ ಸೇವಾ ಕೇಂದ್ರ/ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತರ ಎಫ್.ಐ.ಡಿ (Farmer’s Identification Number) ಯನ್ನು ಬಳಸಿಕೊಂಡು ಆನ್‌ಲೈನ್‌ ಮೂಲಕ ಆಗಷ್ಟ್  30 ರೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.


ಮುಂಗಾರು ನೀರಾವರಿ ಭತ್ತ ಹಾಗೂ ಮುಂಗಾರು ಮಳೆಯಾಶ್ರಿತ ಶೇಂಗಾ, ತೊಗರಿ ಪೂರ್ಣ ಬೆಳೆ, ಮುಸುಕಿನ ಜೋಳ, ನವಣೆ ಮತ್ತು ಸಜ್ಜೆ ಬೆಳೆಗಳನ್ನು ಕೃಷಿ ಪ್ರಶಸ್ತಿ ಯೋಜನೆಯಡಿ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಬೆಳೆ ಸ್ಪರ್ಧೆಗೆ ಆಯ್ಕೆ ಮಾಡಲಾಗಿರುತ್ತದೆ.


ಈ ಹಿಂದೆ ಕೃಷಿ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ. ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವಯಲ್ಲಿರುವ ಯಾವುದೇ ಇಲಾಖೆ, ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಆದರೆ ಕೃಷಿ ಮತ್ತು ಕೃಷಿ ಸಂಬಂಧಿತವಾದ ಜಲಾನಯನ ಅಭಿವೃದ್ದಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಮತ್ತು ಪಶು ವೈದ್ಯಕೀಯ ಇಲಾಖೆ, ವಿಶ್ವವಿದ್ಯಾಲಯ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ತಾಂತ್ರಿಕ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ ನೌಕರರು ಮತ್ತು ಅವರ ಕುಟುಂಬವರ್ಗದವರನ್ನು ಹೊರತುಪಡಿಸಿ ಈ ಇಲಾಖೆಗಳಲ್ಲಿನ ನಿವೃತ ತಾಂತ್ರಿಕೇತರ ನೌಕರರು ಮತ್ತು ಈ ಇಲಾಖೆಗಳನ್ನು ಹೊರತುಪಡಿಸಿ ಉಳಿದ ಇಲಾಖೆಗಳ ನಿವೃತ್ತ ನೌಕರರು ಮತ್ತು ಅವರ ಕುಟುಂಬದವರು ಭಾಗವಹಿಸಬಹುದಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago