ಚಾಮರಾಜಮಗರ.19.ಫೆ.25:- ಯಳಂದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಎಸ್ ಡಿ ಎಂ ಸಿ ಅಧ್ಯಕ್ಷ ಸಿದ್ದರಾಜು ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.
ನಮ್ಮ ಕೆಸ್ತೂರು ಸರ್ಕಾರಿ ಪ್ರೌಢಶಾಲೆಯು ತಾಲ್ಲೂಕಿನಲ್ಲಿಯೇ ಮಾದರಿ ಶಾಲೆಯಾಗಿದೆ. ಪ್ರತಿವರ್ಷ ಉತ್ತಮ ಫಲಿತಾಂಶವನ್ನು ನೀಡುತ್ತ ಬಂದಿದೆ.
ಗುಣಮಟ್ಟ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತದೆ.
ವಿದ್ಯಾರ್ಥಿಗಳು ಇಂತಹ ವಸ್ತು ಪ್ರದರ್ಶನ ಆಯೋಜಿಸುವುದರಿಂದ ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರುತ್ತಿದ್ದಾರೆ.
ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಉತ್ತಮವಾಗಿದೆ.
ಇಪ್ಪತ್ತೊಂದನೇ ಶತಮಾನವನ್ನು ವೈಜ್ಞಾನಿಕ ಯುಗವೆಂದು ಕರೆಯಲಾಗುತ್ತದೆ. ಅಂದಿನ ಕಾಲದಲ್ಲೇ ಭಗವನ್ ಬುದ್ದರವರು ಹೇಳಿದ್ದಾರೆ ಪ್ರತಿಯೊಬ್ಬರೂ ಕೂಡ ವೈಜ್ಞಾನಿಕ ಮನೋಭಾವನೆ ಬೆಳಸಿಕೊಳ್ಳಿ ಎಂದು ತಿಳಿಸಿದ್ದಾರೆ
ಸಾಧನೆ ಮಾಡಿದರೆ ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ ಎಂದರು .
ಈ ವಸ್ತು ಪ್ರದರ್ಶನ ವೀಕ್ಷಿಸಲು ಕಟ್ನವಾಡಿ, ಕೆ ಹೊಸೂರು, ಬಸವಪುರ, ಮಲ್ಲಿಗಹಳ್ಳಿ, ಕೆಸ್ತೂರು ೧ ಮತ್ತು ೨ ಶಾಲೆಯ ವಿದ್ಯಾರ್ಥಿಗಳು ಆಗಮಿಸಿದರು.
ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷ ಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರಾದ ಉಮಶಂಕರ್, ಎಸ್ ಡಿ ಎಂ ಸಿ ಸದಸ್ಯರಾದ ಪರಶಿವಮೂರ್ತಿ, ಹಾಗೂ ಎಲ್ಲಾ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿ ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು
Repoter: G.Prasa Kumar kittur
ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್ ಪರಿಶೀಲಿಸಬೇಕು'…
ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…
ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…