ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆ ಸೆಟಿ ಪರೀಕ್ಷಾಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆ ನ. 24 ರಂದು ನಡೆದಿತ್ತು. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ
ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದ ಒಟ್ಟು 41 ವಿಷಯಗಳಿಗೆ ನ.24 ರಂದು ನಡೆದ ಪರೀಕ್ಷೆಯಲ್ಲಿ ಒಟ್ಟು 6,302 ಮಂದಿ ಅರ್ಹತೆ ಪಡೆದಿದ್ದು, ಅಷ್ಟೂ ಮಂದಿಯ ನೋಂದಣಿ ಸಂಖ್ಯೆಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆ-ಸೆಟ್ ಪರೀಕ್ಷೆಗೆ ಒಟ್ಟು 1,06,433 ಮಂದಿ ನೋಂದಾಯಿಸಿಕೊಂಡು, 89,416 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಅವರ ಪೈಕಿ 6,302 ಮಂದಿ ಅರ್ಹತೆ ಪಡೆದಿದ್ದಾರೆ. ಇವರಲ್ಲಿ ಪುರುಷರು 3,275 ಹಾಗೂ ಮಹಿಳೆಯರು 3,020 ಹಾಗೂ ತೃತೀಯ ಲಿಂಗಿಗಳು 7 ಮಂದಿ ಇದ್ದಾರೆ. ವಿಶೇಷ ಸಾಮರ್ಥ್ಯವುಳ್ಳ 293 ಮಂದಿ ಕೂಡ ಈ ಪಟ್ಟಿಯಲ್ಲಿ ಸೇರಿದ್ದಾರೆ ಎಂದು ವಿವರಿಸಿದ್ದಾರೆ.
ಅರ್ಹತೆ ಹೊಂದಿರುವ ಅಭ್ಯರ್ಥಿಗಳ ಸಂಖ್ಯೆಯು ಎರಡೂ ಪತ್ರಿಕೆಗಳಿಗೆ (ಪೇಪರ್ I ಮತ್ತು ಪೇಪರ್ II) ಹಾಜರಾದ ಒಟ್ಟು ಅಭ್ಯರ್ಥಿಗಳ ಶೇ 6ರಷ್ಟಿದೆ. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.
ನವಂಬರ 24 ರಂದು ಪರೀಕ್ಷೆ ನಡೆದೀತು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…