ಕೇಂದ್ರದಲ್ಲಿ SEP ಎಸ್‌ಇಪಿ, TSP ಟಿಎಸ್‌ಪಿ ಯೋಜನೆ ಜಾರಿಗೆ ತರಲಿ. ಸಿ. ಎಂ ಸಿದ್ಧರಾಮಯ್ಯ

ಬೆಂಗಳೂರು.15.ಏಪ್ರಿಲ್.25:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿಯವರಿಗೆ ಈಗ ಗಾಂಧೀಜಿ ಮತ್ತು ಅಂಬೇಡ್ಕರ್‌ ಬಗ್ಗೆ ಪ್ರೀತಿ ಶುರುವಾಗಿದೆ. ಅಂಬೇಡ್ಕರ್‌ ಬಗ್ಗೆ ಪ್ರೀತಿಯಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ SEP ಎಸ್‌ಇಪಿ, TSP ಟಿಎಸ್‌ಪಿ ಯೋಜನೆ ಜಾರಿಗೆ ತರಲಿ ಎಂದರು.

ಸಮಾಜ ಕಲ್ಯಾಣ ಇಲಾಖೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ “ಅಂಬೇಡ್ಕರ್‌ ಪ್ರಶಸ್ತಿ ಪ್ರದಾನ ‘ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಿಜೆಪಿಯವರು ಅಂಬೇಡ್ಕರ್‌ ಬಗ್ಗೆ ಪ್ರೀತಿ ತೋರಿಸಲು ಆರಂಭಿಸಿದ್ದಾರೆ. ಅಷ್ಟು ಪ್ರೀತಿಯಿದ್ದರೆ ಎಸ್‌ಸಿಪಿ ,ಟಿಎಸ್‌ಪಿ ಯೋಜನೆಯಲ್ಲಿ ಅವರ ಅಧಿಕಾರದಲ್ಲಿ ಏಕೆ ಜಾರಿಗೆ ತರಲಿಲ್ಲ. ಈಗಲೂ ಬಿಜೆಪಿ ತಾನು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಗೆ ತರಲಿ. ಇಡೀ ದೇಶದಲ್ಲಿ ಜಾರಿ ಮಾಡಲಿ. ಇದು ನಿಮ್ಮಿಂದ ಸಾಧ್ಯವಾ ಎಂದು ಕುಟುಕಿದರು. ಬಿಜೆಪಿಯವರ ಢೋಂಗಿ ತನಕ್ಕೆ ಜನರು ತಕ್ಕ ಉತ್ತರ ನೀಡಬೇಕು.ಆಂಧ್ರ ಪ್ರದೇಶ ಮತ್ತು ಕರ್ನಾಟಕ ಮಾತ್ರ ಈ ಯೋಜನೆ ಜಾರಿಗೆ ತಂದಿದೆ. ನಾನು ಸಿಎಂ ಆದ ಮೇಲೆ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ತಂದಿದ್ದೇನೆ. ರಾಷ್ಟ್ರಮಟ್ಟದಲ್ಲಿ ಈ ಕಾಯ್ದೆಯನ್ನು ಜಾರಿಗೆ ತಂದು ತೋರಿಸಿ ಎಂದು ಸವಾಲು ಹಾಕಿದರು.

ಬಿಜೆಪಿ ಆಡಳಿತದಲ್ಲಿ ದುರುಪಯೋಗ:
ವರ್ಷದಿಂದ ವರ್ಷಕ್ಕೆ ಬಜೆಟ್‌ ಗಾತ್ರ ಹೆಚ್ಚಿದಂತೆ ಎಸ್‌ಇಪಿ ಟಿಎಸ್‌ಪಿ ಹಣ ಹೆಚ್ಚಾಗಬೇಕು.ಆದರೆ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಇದು ಕಡಿಮೆ ಆಯಿತು. ಆದರೆ ನಾವು ಅ ಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೀವಿ. ಈ ಬಾರಿ 42018 ಕೋಟಿ ರೂ. ನಾವು ತೆಗೆದಿಟ್ಟಿದ್ದೀವಿ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಆಡಳಿತ ಅವಧಿಯಲ್ಲಿ 8300 ಕೋಟಿ ಎಸ್‌ಇಪಿ ಟಿಎಸ್‌ಪಿ ಹಣ ದುರುಪಯೋಗ ಆಗಿದೆ. ಇಂತಹವರು ನಮ್ಮ ಮೇಲೆ ನಾಚಿಕೆಯಿಲ್ಲದೆ ಆರೋಪ ಮಾಡುತ್ತಾರೆ ಎಂದು ವಾಗ್ಧಾಳಿ ನಡೆಸಿದರು.

ಗೋಡ್ಸೆ ನಿಮ್ಮವರು; ಅಂಬೇಡ್ಕರ್‌ ನಮ್ಮವರು:
ಎಲ್ಲಾ ಜಾತಿ, ಧರ್ಮದವರನ್ನೂ ಸಮಾನವಾಗಿ ಕಾಣುವ ಎಲ್ಲರ ಪ್ರಗತಿಗೆ ಕಾರ್ಯಕ್ರಮಗಳನ್ನು ರೂಪಿಸಿ, ಜಾರಿ ಮಾಡಿರುವ ಚರಿತ್ರೆ ಮತ್ತು ವರ್ತಮಾನ ಕಾಂಗ್ರೆಸ್‌ ಪಕ್ಷಕ್ಕೆ ಇದೆ. .ಬಿಜೆಪಿಯವರಿಗೆ ಸಾವರ್ಕರ್‌ ಮತ್ತು ಗಾಂ ಧೀಜಿಯನ್ನು ಕೊಲೆ ಮಾಡಿದ ಗೋಡ್ಸೆ ಬಿಟ್ಟು ಉಳಿದ ಯಾರೂ ಬೇಕಾಗಿಲ್ಲ. ಆದರೆ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎನ್ನುವ ಮೂರು ಮಂತ್ರಗಳನ್ನು ನಮಗೆ ನೀಡಿದ ಅಂಬೇಡ್ಕರ್‌ ನಮ್ಮವರು ಇವರು ನಮಗೆ ಬೇಕು ಎಂದು ಹೇಳಿದರು.
ಮನುವಾದಿಗಳು ಸಂವಿಧಾನವನ್ನು ವಿರೋ ಸಿದ್ದನ್ನು, ಅಂಬೇಡ್ಕರ್‌ಅವರು ಮನುಸ್ಮತತಿಗೆ ಬೆಂಕಿ ಹಾಕಿ ಸುಟ್ಟಿದ್ದು ಏಕೆ ಎನ್ನುವುದನ್ನು ನಮ್ಮ ಕಾರ್ಯಕರ್ತರು ಸ್ಪಷ್ಟವಾಗಿ ಅರಿತುಕೊಳ್ಳಬೇಕು. ಇವತ್ತಿನ ಯುವ ಸಮುದಾಯಕ್ಕೆ ಸತ್ಯವನ್ನು ಅರ್ಥ ಮಾಡಿಸಬೇಕು. ಮನುಸ್ಮತಿ ಮತ್ತು ಜಾತಿ ವ್ಯವಸ್ಥೆ ಕಾರಣದಿಂದ ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾಗಿದ್ದ ಎಲ್ಲಾ ಜಾತಿ, ಸಮುದಾಯಗಳನ್ನು ದೌರ್ಜನ್ಯಮುಕ್ತಗೊಳಿಸಲು ಅಂಬೇಡ್ಕರ್‌ಅವರ ಬದುಕು ಮುಡಿಪಾಗಿತ್ತು ಎಂದರು.

ನಾನು ಮೇಲ್ಜಾತಿಯ ವಿರೋಧಿಯಲ್ಲ:
ಸಿದ್ದರಾಮಯ್ಯ ಅವರು ಮೇಲ್ಜಾತಿಯ ವಿರೋಧಿ ಮುಸ್ಲಿಂರನ್ನು ಓಲೈಕೆ ಮಾಡುತ್ತಾರೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.ಆದರೆ ನಾನು ಯಾವ ಧರ್ಮದ ವಿರೋಧಿಯಲ್ಲ. ಎಲ್ಲ ವರ್ಗಗಳಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ನ್ಯಾಯ ನೀಡುವ ಕೆಲಸ ಮಾಡುತ್ತಿದ್ದೇನೆ. ಅಂಬೇಡ್ಕರ್‌ ಮಾರ್ಗದಲ್ಲಿ ಸಾಗುತ್ತಿದ್ದೇನೆ. ಮುಸ್ಲಿಂ ಸಮುದಾಯ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿದೆ. ಅಂತಹ ಸಮಾಜಗಳಿಗೆ ಶಕ್ತಿ ತುಂಬವ ಕೆಲಸ ಮಾಡುತ್ತಿದ್ದೇನೆ. ಅಂಬೇಡ್ಕರ್‌ ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಡಾ.ಎಚ್‌.ಸಿ. ಮಹಾದೇವಪ್ಪ, ಕೆ.ಎಚ್‌.ಮುನಿಯಪ್ಪ,ಸಭಾಪತಿ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಶಾಸಕ ರಿಜ್ವಾನ್‌ ಅರ್ಷದ್‌ ಸೇರಿದಂತೆ ಸಮಾಜಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

2 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

2 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

3 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

4 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

5 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

6 hours ago