====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಕಲಬುರಗಿ.07.ಮಾರ್ಚ.25-ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಹೆಚ್ಚಿನ ಚಪಾತಿಗಳನ್ನು ಕೆಲ ವಿದ್ಯಾರ್ಥಿಗಳು ಕೊಂಡೊಯ್ದರೆಂಬ ಕಾರಣಕ್ಕೆ ವಿದ್ಯಾರ್ಥಿಗಳ ಎರಡು ಗುಂಪುಗಳ ಮಧ್ಯೆ ಗುರುವಾರ ರಾತ್ರಿ ಹೊಡೆದಾಟ ನಡೆದಿದೆ. ಶುಕ್ರವಾರ ವಿಶ್ವವಿದ್ಯಾಯ ಕ್ಯಾಂಪಸ್ನಲ್ಲಿ ತುಂಬಾ ಬೀಸಿ ವಾತಾವರಣ ಇತ್ತು.
ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿಕೊಂಡಿರುವ ಮುಖಂಡರು ಚಪಾತಿಗಳನ್ನು ಕೊಂಡೊಯ್ದಿದ್ದನ್ನು ಇತರೆ ವಿದ್ಯಾರ್ಥಿಗಳು ಆಕ್ಷೇಪಿಸಿದರು. ಇದರಿಂದಾಗಿ ಪರಸ್ಪರ ಹಲ್ಲೆ ನಡೆದಿದ್ದು, ಕೆಲ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಘಟನೆಯ ಗಂಭೀರತೆ ಅರಿತ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ಗೋಪಿ ಹಾಗೂ ಆಳಂದ ಸಿಪಿಐ ಪ್ರಕಾಶ ಯಾತನೂರ ಅವರು ವಿಶ್ವವಿದ್ಯಾಲಯ. ಕ್ಯಾಂಪಸ್‌ಗೆ ದೌಡಾಯಿಸಿದ್ದರು. ಈ ಸಂದರ್ಭದಲ್ಲಿ ಕೆಲವರು ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರಿಂದ ಅವರನ್ನು ಚದುರಿಸಲು ಲಾಠಿ ಬೀಸಿದರು ಎಂದು ವಿಶ್ವವಿದ್ಯಾಲಯ ವಿದ್ಯಾರ್ಥಿಯೊಬ್ಬರು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮಧ್ಯಾಹ್ನವೂ ವಿಶ್ವವಿದ್ಯಾಲಯ ಗ್ರಂಥಾಲಯದ ಬಳಿ ಮತ್ತೆ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಕೆಲ ವಿದ್ಯಾರ್ಥಿಗಳನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.
ಬಿಹಾರ. ಉತ್ತರ ಪ್ರದೇಶ, ಮೂಲದ ವಿದ್ಯಾರ್ಥಿಗಳು ಒಂದೆಡೆಯಾದರೆ ಕರ್ನಾಟಕ, ತಮಿಳುನಾಡು.ಕೇರಳ, ಆಂಧ್ರಪ್ರದೇಶ, ವಿದ್ಯಾರ್ಥಿಗಳು ಮತ್ತೊಂದು ಗುಂಪಿನಲ್ಲಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರೊಬ್ಬರು ಮಾಹಿತಿ ನೀಡಿದರು.
ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಯುಕೆ ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಅವರನ್ನು ಸಂಪರ್ಕಿಸಿದರೂ ಅವರು ಸಂಪರ್ಕಕ್ಕೆ ಲಭ್ಯರಾಗಲಿಲ್ಲ.
ಊಟದ ವೇಳೆ ಮನಸ್ತಾಪ ಉಂಟಾಗಿ ವಿದ್ಯಾರ್ಥಿಗಳ ಮಧ್ಯೆ ಗಲಾಟೆಯಾಗಿತ್ತು. ದೂರು ನೀಡಲು ಯಾರೂ ಬಂದಿಲ್ಲ. ತಾವೇ ವಿವಾದ ಇತ್ಯರ್ಥ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ
-ಅಡ್ಡೂರು ಶ್ರೀನಿವಾಸುಲು ಪೊಲೀಸ್ ವರಿಷ್ಠಾಧಿಕಾರಿ ಕಲಬುರಗಿ
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೆಂಗಳೂರು.13.ಆಗಸ್ಟ್.25:-2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ "ಮೀಡಿಯಾ ಕಿಟ್" ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು…
ಬೆಂಗಳೂರು.13.ಆಗಸ್ಟ್.25:- ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳು ಶೀಘ್ರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ…
ಚಿಕ್ಕಬಳ್ಳಾಪುರ.13.ಆಗಸ್ಟ್.25:- ಇಂದು ನಗರದಲ್ಲಿ ಮಹಾನಾಯಕ ಅಂಬೇಡ್ಕರ್ ಸೇನೆ ಅಧ್ಯಕ್ಷ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು ದಲಿತ ನಾಯಕ ಹಾಗೂ ಮಾಜಿ ಶಾಸಕ…
ಕೊಪ್ಪಳ.13.ಆಗಸ್ಟ್ 25 : ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿನ ಎನ್.ಜಿ.ಓ ಕಾಲೋನಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರೀಡಿಂಗ್ ಸೆಂಟರ್, ಮುಖ್ಯಗ್ರಂಥಾಲಯಾಧಿಕಾರಿ ಕಛೇರಿಯಲ್ಲಿ ಮಂಗಳವಾರ…
ಕೊಪ್ಪಳ.13.ಆಗಸ್ಟ್.25: ವಿದೇಶಿ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ `ಸ್ಟಡಿ ಅಬ್ರಾಡ್' ಕಾರ್ಯಕ್ರಮಕ್ಕೆ ಭಾಗವಹಿಸಲಿಚ್ಛೀಸುವ ಕೊಪ್ಪಳ ಜಿಲ್ಲೆಯ ವಿದ್ಯಾರ್ಥಿಗಳು…
ಬೆಂಗಳೂರು.13.ಆಗಸ್ಟ್.25:- ರಾಜ್ಯಾದ್ಯಂತ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ವೇಳೆ 'DJ' ನಿಷೇಧ ಮುಂಜಾಗ್ರತಾ ಕ್ರಮವಾಗಿ…