ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಕಲಬುರಗಿಯ ಡಾ.ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವರ್ಗವು ಕಾಲೇಜಿನ ಎದುರು ವಿರೋಧ್ ವ್ಯಕ್ತಪಡಿಸಿದ್ರು.ಪ್ರತಿಭಟನೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಜಯಕುಮಾರ್ ಮಾತನಾಡಿ, ‘ಬಾಬಾ ಸಾಹೇಬರನ್ನು ನೆನೆಯೋದು ಪ್ಯಾಷನ್ ಅಲ್ಲ, ಅದು ನಮ್ಮ ಆದ್ಯ ಕರ್ತವ್ಯವಾಗಿದೆ, ಪ್ರತಿ ಬಾರಿಯೂ ನೆನೆದಾಗ ಕೃತಜ್ಞತೆ ಸಲ್ಲಿಸಬೇಕು.
ಕೇಂದ್ರ ಗೃಹ ಸಚಿವ ಅಮಿತ್ ಶಾ ತನ್ನ ಹೇಳಿಕೆಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.
ಕಾಲೇಜಿನ ಪ್ರಾಧ್ಯಾಪಕರಾದ ಡಾ.ಅರುಣ್ ಜೋಳದಕೂಡ್ಲಿಗಿ ಮಾತನಾಡಿ, ‘ಇಂದು ದೇಶದ ಎಲ್ಲಾ ದಮನಿತ ಸಮುದಾಯಗಳು ಎಚ್ಚರಗೊಂಡು ಅಂಬೇಡ್ಕರ್ ಅವರನ್ನು ಕೃತಜ್ಞತೆಯಿಂದ ನೆನೆಯುತ್ತಿರುವಾಗ, ಕೇಂದ್ರದ ಗೃಹ ಸಚಿವ ಅಮಿತ್ ಶಾ ಮಾತು ದೇಶದ ಜನತೆಗೆ ಅವಮಾನ ಮಾಡಿದಂತಾಗಿದ್ದು, ಸಂವಿಧಾನಿಕ ಹುದ್ದೆಯಲ್ಲಿದ್ದು ಇದೊಂದು ಅಸಂವಿಧಾನಿಕ ಹೇಳಿಕೆ ನೀಡಿರುವುದು ಖಂಡನೀಯ’ ಎಂದರು.
ಪ್ರತಿಭಟನೆಯಲ್ಲಿ ಪ್ರಾಧ್ಯಾಪಕರುಗಳಾದ ಡಾ.ಸಿದ್ದಪ್ಪ ಎಸ್.ಕಾಂತ, ಡಾ.ನಿರ್ಮಲಾ ಸಿರಗಾಪುರ, ಡಾ.ಸುದರ್ಶನ್ ಮದನಕರ್, ಡಾ.ಗಾಂದೀಜಿ ಮೋಳೆಕರ್, ಡಾ.ಕರಿಬಸಪ್ಪ, ಡಾ.ವಸಂತ ನಾಶಿ, ಬಿ.ಕೆ.ಪಂಡಿತ್ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…