“ಕೊಡಗು ವಿಶ್ವವಿದ್ಯಾಲಯ” ಉಳಿಸಲು ಹೋರಾಟಕೆ ಸಿದ್ಧ.!

ಕುಶಾಲನಗರ: 17.ಫೆ.25:- ಕುಶಾಲನಗರ ತಾಲ್ಲೂಕಿನ ಚಿಕ್ಕಅಳುವಾರ ಸ್ನಾತಕೋತ್ತರ ಕೇಂದ್ರ ದಲ್ಲಿ 2 ವರ್ಷಗಳ ಹಿಂದೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಆರಂಭಗೊಂಡ ಪ್ರತ್ಯೇಕ ಕೊಡಗು ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಸರ್ಕಾರವನ್ನು ಒತ್ತಾಯಿಸಲು ಭಾನುವಾರ ನಡೆದ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ. ಪ್ರಗತಿಪರ ಸಂಘಟನೆಗಳು.ವಿದ್ಯಾರ್ಥಿಯ.ಪಾಲಕರು ಸಭೆಯಲ್ಲಿ ಹೋರಾಟಕ್ಕೆ ನಿರ್ಣಯಿಸಲಾಗಿದೆ.

ನೂತನ ಹೋರಾಟ ಸಮಿತಿಯನ್ನು ರಚನೆ ಮಾಡಲಾಯಿತು. ಚಿಕ್ಕ ಅಳುವಾರ ಗ್ರಾಮದ ಅಳುವಾರಮ್ಮ ದೇವಾಲಯಸಮುದಾಯ ಭವನದಲ್ಲಿ ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಮಟ್ಟದಲ್ಲಿ ಹೋರಾಟ , ಸರ್ಕಾರಕ್ಕೆ ನಿಯೋಗ ತೆರಳುವುದು ಪಕ್ಷಾತೀತವಾ ಹೋರಾಟಕ್ಕೆ ಸಮಿತಿಯನ್ನು ರಚನೆ ಮಾಡಲಾಯಿತು.

ಗ್ಯಾರಂಟಿ ಅನುಷ್ಠಾನದ ತಾಲ್ಲೂಕು ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಸಚಿವ ಸಂಪುಟದ ಉಪಸಮಿತಿಯಲ್ಲಿ 9 ನೂತನ ವಿವಿಗಳನ್ನು ಮುಚ್ಚಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ವಿಶ್ವ ವಿದ್ಯಾಲಯ ಮುಂದುವರಿಸಬೇಕು.

ನೂರು ಎಕರೆ ಪ್ರದೇಶವನ್ನು ಹೊಂದಿದೆ. ತಾಂತ್ರಿಕ ಅಡಚಣೆ ಇಲ್ಲ. ಸೌಕರ್ಯ , ಮಾನದಂಡವನ್ನು ಹೊಂದಿದೆ. ಸಿಬ್ಬಂದಿ ನೇಮಕವಾಗಿದೆ. ಮಂಗಳೂರು ವಿವಿ ಯಿಂದ ಸಂಬಳ ಬರುತ್ತಿತ್ತು. ಸರ್ಕಾರದ ನೂತನ ಕುಲಪತಿ ಅನುದಾನವಿಲ್ಲದೆ ವಿವಿಯನ್ನು ಮುನ್ನಡೆಸುತ್ತಿದ್ದಾರೆ. ನಮ್ಮ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಕೊಡಗು ವಿವಿ ಉಳಿಸಲು ಹೋರಾಟ ಅನಿವಾರ್ಯವಾಗಿದೆ ಎಂದರು.

ಸಮಾಜ ಸೇವಕ ನಾಪಂಡ ಮುತ್ತಪ್ಪ ಮಾತನಾಡಿ, ನೂತನ ವಿವಿಗಳಿಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಣೆ ಮಾಡಿಲ್ಲ. ಕೊಡಗು ವಿವಿಗೆ ₹3 ಕೋಟಿ ಅನುದಾನ ಬೇಕು. ಮೀನಾ ಮೇಷ ಎಣಿಸುತ್ತಿರುವುದು ಸರಿಯಲ್ಲ. ವಿವಿ ಮುಚ್ಚುವ ನಿರ್ಧಾರ ಕೈಬಿಡಬೇಕು ಎಂದರು.

ಸೆನೆಟ್ ಮಾಜಿ ಸದಸ್ಯ ಡಿ.ಆರ್.ಪ್ರೇಮ್‌ಕುಮಾರ್ ಮಾತನಾಡಿ, ಸರ್ಕಾರಿ ಜಾಗವನ್ನು ಕೆಲವು ವ್ಯಕ್ತಿಗಳು ಅತಿಕ್ರಮಣ ಮಾಡಲು ಯತ್ನಿಸಿದಾಗ ಸಂಘಟಿತ ಹೋರಾಟ ನಡೆಸಿ ಜಾಗವನ್ನು ಉಳಿಸಿದ್ದೇವೆ.ಇದೇ ಜಾಗದಲ್ಲಿ ಈಗ ಸ್ನಾತಕೋತ್ತರ ಕೇಂದ್ರ ಹಾಗೂ ಕೊಡಗು ವಿವಿ ಸ್ಥಾಪನೆಯಾಗಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಿದೆ ಎಂದರು.

ತೊರೆನೂರು ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್ ಮಾತನಾಡಿ ಕೊಡಗು ವಿವಿ ಉಳಿಸಲು ಶಾಸಕರು ಹೆಚ್ಚಿನ ಒತ್ತು ನೀಡಬೇಕು ಎಂದರು. ಹೆಬ್ಬಾಲೆ ಗ್ರಾಮದ ಮುಖಂಡ ಎಚ್.ಕೆ.ನಟೇಶ್ ಗೌಡ ಮಾತನಾಡಿ, ಮಂಗಳೂರು ವಿವಿ ವ್ಯಾಪ್ತಿಗೆ ಮತ್ತೆ ಸೇರ್ಪಡೆ ಮಾಡಲು ಅವಕಾಶ ನೀಡಬಾರದು. ಸಂಘಟಿತ ಹೋರಾಟ ನಡೆಸಬೇಕು ಎಂದರು. ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ್ ಮಾತನಾಡಿ, ವಿವಿ ಉಳಿವಿಗಾಗಿ ಕೊಡಗು ಬಂದ್ ಕೂಡ ಮಾಡಲು ನಾವು ಸಿದ್ದರಾಗಿದ್ದೇವೆ ಎಂದರು.

ತೊರೆನೂರು ವಿ.ಎಸ್.ಎಸ್.ಎನ್.ನಿರ್ದೇಶಕ ಎಚ್.ಬಿ.ಚಂದ್ರಪ್ಪ ಮಾತನಾಡಿ, ಪಕ್ಷಾತೀತ ಹೋರಾಟ ನಡೆಸಬೇಕು. ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದರು.

ಕೊಡಗು ವಿಶ್ವವಿದ್ಯಾಲಯ ಹಿತರಕ್ಷಣಾ ಬಳಗದ ಅಧ್ಯಕ್ಷ ಕೆ.ಎಸ್.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ಅಳುವಾರದಮ್ಮ ದೇವಾಲಯ ಸಮಿತಿ ಅಧ್ಯಕ್ಷ ರಮೇಶ್,ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶೋಭಾ ಪ್ರಕಾಶ್,ಉಪಾಧ್ಯಕ್ಷ ಬೇಬಿ,ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಅರುಣಾಕುಮಾರಿ, ಸದಸ್ಯರಾದ ಮಹಾದೇವ್,ನಿಂಗಜಮ್ಮ, ದೇವಾಲಯ ಸಮಿತಿ ಅಧ್ಯಕ್ಷ ಎ.ಎನ್.ರಮೇಶ್ ಮುಖಂಡರಾದ ಎಸ್.ಎಸ್.ಚಂದ್ರಶೇಖರ್, ರಮೇಶ್, ಟಿ.ಕೆ.ಪಾಂಡುರಂಗ, ಲೋಕೇಶ್ ಸಾಗರ್, ಗಣೇಶ್, ಲೋಕೇಶ್, ಟಿ.ಪಿ.ಜಗದೀಶ್, ರಮೇಶ್, ಶಾಂತಿ, ಗೀತಾಧರ್ಮಪ್ಪ, ಅಜ್ಜಳ್ಳಿ ರವಿ, ಬಸಪ್ಪ, ಶಿವಪ್ಪ, ಉಮೇಶ್, ವಿಎಸ್‌ಎಸ್‌ಎನ್ ನಿರ್ದೇಶಕ ಎಚ್.ಸಿ.ಮೂರ್ತಿ ಪಾಲ್ಗೊಂಡಿದ್ದರು.

‘ವಿದ್ಯಾರ್ಥಿ ಕೊರತೆ, ಸಂಬಳ ಇಲ್ಲ’

ಸ್ನಾತಕೋತ್ತರ ಕೇಂದ್ರದ ಹಳೆಯ ವಿದ್ಯಾರ್ಥಿ ಶರತ್ ಮಾತನಾಡಿ, ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗುತ್ತಿದೆ. ವಿದ್ಯಾರ್ಥಿ ಕೊರತೆಯಿಂದ ಕೆಲವು ಕೋರ್ಸ್ ಮುಚ್ಚಿ ಹೋಗಿವೆ. ಜೊತೆಗೆ ಅಲ್ಲಿನ ಅಧ್ಯಾಪಕರಿಗೆ, ಅತಿಥಿ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ಸರಿಯಾಗಿ ವೇತನ ಬರುತ್ತಿಲ್ಲ. ಇದರಿಂದ ಮಂಗಳೂರು ವಿವಿಗೆ ಸೇರಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.

ಹಳೆಯ ವಿದ್ಯಾರ್ಥಿ ಆರನೇ ಹೊಸಕೋಟೆಯ ಮನು ಮಾತನಾಡಿ, ಕಾಯಂ ಪ್ರಾಧ್ಯಾಪಕ ಹಾಗೂ ಸಿಬ್ಬಂದಿ ಇಲ್ಲ. ಅನೇಕ ಕೊರತೆಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಈಗಾಗಲೇ ಮೂರು, ನಾಲ್ಕು ಕೋರ್ಸ್ ಮುಚ್ಚಿವೆ.

ರಾಜ್ಯಶಾಸ್ತ್ರ ವಿಭಾಗ ಉಳಿಸಲು ಶತಪ್ರಯತ್ನ ಮಾಡಿದ್ದೇವೆ. ಪದವಿ ಕಾಲೇಜುಗಳಿಗೆ ಹೋಗಿ ವಿದ್ಯಾರ್ಥಿಗಳನ್ನು ಮನವೊಲಿಸುವ‌ ಕೆಲಸ ಮಾಡಿದ್ದೇವೆ ಎಂದರು.

ಕುಶಾಲನಗರ ತಾಲೂಕಿನ ಕೊಡಗು ವಿಶ್ವವಿದ್ಯಾಲಯ ಉಳಿಸಲು  ವಿದ್ಯಾರ್ಥಿಯಗಳ ವಿವಿಧ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳು ಹೋರಾಟಕ್ಕೆ ನಿರ್ಣಯಿಸಲಾಗಿದೆ

prajaprabhat

Recent Posts

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

27 minutes ago

ರಾಯ್‌ಪುರ ರೈಲು ನಿಲ್ದಾಣದಿಂದ ರಾಯ್‌ಪುರ-ಜಬಲ್‌ಪುರ ಹೊಸ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ವಿಧಾನಸಭಾ ಸ್ಪೀಕರ್ ಡಾ. ರಮಣ್ ಸಿಂಗ್ ಅವರು ಇಂದು ರಾಜಧಾನಿ ರಾಯ್‌ಪುರ…

30 minutes ago

ಉತ್ತರ ಪ್ರದೇಶದ ಗೊಂಡಾದಲ್ಲಿ ವಾಹನ ಕಾಲುವೆಗೆ ಬಿದ್ದು 11 ಮಂದಿ ಸಾವು

ಗೂಂಡಾ.03.ಆಗಸ್ಟ್.25:- ಉತ್ತರ ಪ್ರದೇಶದ ಗೊಂಡಾದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.…

31 minutes ago

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

5 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

5 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

5 hours ago