ಕೊಪ್ಪಳ: ಅತ್ಯಾಚಾರ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ

ಕೊಪ್ಪಳ.09.ಜುಲೈ.25:- ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮತ್ತು ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ)ವು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.5 ಸಾವಿರ ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ.


ಯಲಬುರ್ಗಾ ಪಟ್ಟಣದ ನಿವಾಸಿ ಮಹೇಶ ಖಂಡ್ರಿ ಎಂಬ ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಪರಿಚಯಿಸಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ 2023ರ ಸೆಪ್ಟೆಂಬರ್ 05 ರಿಂದ 2024 ರ ಫೆಬ್ರವರಿ 24 ರವರೆಗೆ ಹಲವಾರು ಬಾರಿ ಬೆದರಿಕೆಯೊಡ್ಡಿ ಅತ್ಯಾಚಾರ ಎಸಗಿದ್ದು, ಯಾರಿಗೂ ಹೇಳದಂತೆ ತಾಕೀತು ಮಾಡಿದ್ದನು.

ಬಾಲಕಿಯೊಂದಿಗೆ ಆರೋಪಿಯು ಜೊತೆಗಿದ್ದಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ನಂತರ ಓಡಿ ಹೋಗಿದ್ದನು. ನಂತರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿತ್ತು. ಈ ಬಗ್ಗೆ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಠಾಣೆಯ ಪಿ.ಎಸ್.ಐ ವಿಜಯ ಪ್ರತಾಪ ಅವರು .  ಪ್ರಥಮ ಹಂತದ ತನಿಖೆ ನಡೆಸಿದ್ದರು. ಮುಂದಿನ ತನಿಖೆಯನ್ನು ಯಲಬುರ್ಗಾ ಸಿಪಿಐ ಮೌನೇಶ್ವರ ಮಾಲಿಪಾಟೀಲ ಅವರು ನಿರ್ವಹಿಸಿ ತನಿಖೆಯಲ್ಲಿ ಆರೋಪಿತನ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.


ಪ್ರಕರಣವು ಸ್ಪೇ.ಎಸ್‌ಸಿ(ಪೋಕ್ಸೋ) ಸಂ: 20/2024 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಕುಮಾರ ಡಿ.ಕೆ ಅವರು ಆರೋಪಿತನ ಮೇಲಿನ ಆರೋಪಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.5,000/- ಗಳ ದಂಡವನ್ನು ವಿಧಿಸಿ ಜುಲೈ 3 ರಂದು ತೀರ್ಪು ನೀಡಿದ್ದಾರೆ.


ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು. ಯಲಬುರ್ಗಾ ಪೊಲೀಸ್ ಠಾಣೆಯ ಸಿಬ್ಬಂದಿ ವಿಜಯಲಕ್ಷಿö್ಮಇವರು ಸಾಕ್ಷೀದಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಸಹಕರಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮತ್ತು ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೋ)ದ ವಿಶೇಷ ಸರ್ಕಾರಿ ಅಭಿಯೋಜಕರ (ಪೋಕ್ಸೋ) ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

prajaprabhat

Recent Posts

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

12 minutes ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

18 minutes ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

33 minutes ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

35 minutes ago

9ನೇ ವರ್ಷದ ಸಸ್ಯಸಂತೆ & ತೋಟಗಾರಿಕೆ ಅಭಿಯಾನ ಆಯೋಜನೆಗೆ ಕ್ರಮ- ಕೃಷ್ಣ ಉಕ್ಕುಂದ

ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…

39 minutes ago

ಆಗಸ್ಟ್ 7ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್

ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…

45 minutes ago