ಕೊಪ್ಪಳ.01.ಆಗಸ್ಟ್.25: ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಜುಲೈ 27 ರಂದು ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲ್ವೆ ಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ:34/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಅಗಲವಾದ ಮುಖ, ಅಗಲವಾದ ಹಣೆ, ಸಾದಾಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5 ಅಡಿ 5 ಇಂಚು ಎತ್ತರ, ತಲೆಯಲ್ಲಿ ಸುಮಾರು 3-4 ಇಂಚು ಕಪ್ಪು ಕೂದಲುಗಳಿವೆ. ಸುಮಾರು 1 ಇಂಚು ಕಪ್ಪು ದಾಡಿ-ಮೀಸೆ ಇರುತ್ತವೆ. ಮೃತನ ಮೈಮೇಲೆ ಒಂದು ಹಳದಿ ಕಲರಿನ ಫುಲ್ ಟಿ-ಶರ್ಟ, ಒಂದು ಆಕಾಶ ನೀಲಿ ಕಲರಿನ ನೈಟ್ ಪ್ಯಾಂಟ್, ಒಂದು ಕೆಂಪು ಕಲರಿನ ಅಂಡರವಿಯರ್ ಇರುತ್ತದೆ.
ಈ ಮೃತ ವ್ಯಕ್ತಿ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ, ಸಂಬoಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ: 9480802128, ಇ-ಮೇಲ್: gadagrly@ksp.gov.in ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…