ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಕೊಪ್ಪಳ.05.ಜುಲೈ.25: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಜುಲೈ 6 ಮತ್ತು 7 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಸಚಿವರು ಜು. 6ರಂದು ಕೊಪ್ಪಳ ಜಿಲ್ಲೆಯ ಕಾರಟಗಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು. ಜು. 7ರಂದು ಬೆಳಿಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ, 11.30ಕ್ಕೆ ಕೊಪ್ಪಳಕ್ಕೆ ಆಗಮಿಸಿ, ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿರುವ ಕಾರಣ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30ಕ್ಕೆ ಕೊಪ್ಪಳದಿಂದ ನಿರ್ಗಮಿಸಿ, ಸಂಜೆ 5 ಗಂಟೆಗೆ ಕಾರಟಗಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಹಾಗೂ ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ನಡೆಸಿ, ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಶಾಸನಬದ್ಧ ಹುದ್ದೆಗಳ ನೇಮಕಾತಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ.ಪ್ರಾಧ್ಯಾಪಕರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರು.07.ಜುಲೈ.25:- ವಿಶ್ವವಿದ್ಯಾಲಯದ 10 ಜನ ದಲಿತ ಪ್ರಾಧ್ಯಾಪಕರು ಸಾಮೂಹಿಕ ರಾಜೀನಾಮೆ? ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿಯ ಶಿಕ್ಷಕರ ವಿರುದ್ಧ ವ್ಯವಸ್ಥಿತ…

2 hours ago

ಭಾರಿ ಗಾತ್ರದ ಹೆಬ್ಬಾವು ರಕ್ಷಿಸಿದ ಸ್ನೇಕ್ ಮಹೇಶ್.

ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು  ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು…

13 hours ago

ಅತಿಥಿ ಉಪನ್ಯಾಸಕರ ಪ್ರಮುಖ ಸಮಸ್ಯೆಗಳನ್ನು ಸರ್ಕಾರ ಗಮನಹರಿಸಲೀ.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…

18 hours ago

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ

ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…

22 hours ago

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…

22 hours ago

ಗುರುದ್ವಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…

22 hours ago