ಕೊಪ್ಪಳ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಕೊಪ್ಪಳ.01.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅವರು ಜುಲೈ. 31 ರಂದು ಗುರುವಾರ ಅಫರಾಹ್ನ ಅಧಿಕಾರ ಸ್ವೀಕರಿಸಿದರು.


ಕೊಪ್ಪಳ ಜಿಲ್ಲಾ ಪಂಚಾಯತ  ಉಪ ಕಾರ್ಯದರ್ಶಿ  ಮಲ್ಲಿಕಾರ್ಜುನ ತೊದಲಬಾಗಿ ಅವರು ಧಾರವಾಡ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆ ಈ ಸ್ಥಾನಕ್ಕೆ ಟಿ.ಕೃಷ್ಣಮೂರ್ತಿ ಅವರನ್ನು ಸರ್ಕಾರದ ನೇಮಿಸಿದೆ.


ಟಿ.ಕೃಷ್ಣಮೂರ್ತಿ ಅವರು  ವಿಜಯಪುರ ಜಿಲ್ಲೆಯ ಸಹಕಾರ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಈ ಹಿಂದೆ  ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕೊಪ್ಪಳ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯತ  ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಯೋಜನಾ ನಿರ್ದೇಶಕ ಪ್ರಕಾಶ ವಿ. ಸೇರಿದಂತೆ ಜಿಲ್ಲಾ ಪಂಚಾಯತ್ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

8 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago