ಕೊಪ್ಪಳ.18.ಜೂನ.25:- ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ನೂತನ ಡಿಸಿ ಅವರಿಗೆ ಅಧಿಕಾರಿ ಹಸ್ತಾಂತರಿದರು.
ಕರ್ನಾಟಕ ಕೇಡರ್ 2016ರ ಐಎಎಸ್ ಬ್ಯಾಚನ ಅಧಿಕಾರಿಯಾದ ಸುರೇಶ ಬಿ. ಇಟ್ನಾಳ ಅವರು ಮೂಲತಃ ಕರ್ನಾಟಕದವರಾಗಿದ್ದು, ಅವರು ಈ ಮೊದಲು ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅಪರ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಅಧಿವೇಶನದ ವಿಶೇಷಾಧಿಕಾರಿಯಾಗಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ಧಾರವಾಡ ಮತ್ತು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಸದ್ಯ ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…