|

ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳ 7, 8 & 9ನೇ ತರಗತಿ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನ

ಕೊಪ್ಪಳ.13.ಜೂನ್.26: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕೆ.ಆರ್.ಇ.ಐ.ಸ್) ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಯ ಸೀಟುಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಕೆ ಹಾಗೂ ಪ್ರವೇಶಾತಿಗೆ ಸಂಬAಧಿಸಿದ ಸಂಪೂರ್ಣ ಮಾಹಿತಿಯನ್ನು ಕೊಪ್ಪಳ ಜಿಲ್ಲಾ ಆಡಳಿತದ ಅಧಿಕೃತ ವೆಬ್‌ಸೈಟ್ www.Koppal.nic.in ನಲ್ಲಿ ಪ್ರಕಟಿಸಲಾಗಿದೆ. ವೆಬ್‌ಸೈಟ್‌ನ ಮುಖಪುಟದಲ್ಲಿ “2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ 7ನೇ, 8ನೇ ಹಾಗೂ 9ನೇ ತರಗತಿಯ ಸೀಟುಗಳನ್ನು ಭರ್ತಿ ಮಾಡಿಕೊಳ್ಳುವ ಬಗ್ಗೆ” ಎಂಬ ಶೀರ್ಷಿಕೆಯಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿ ನಿಯಮಾವಳಿಗಳನ್ನು ಪರಿಶೀಲಿಸಿ ಜೂನ್ 30 ರೊಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಅಜ್ಜಪ್ಪ ಸೂಗಲದ್ ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                

Similar Posts

Leave a Reply

Your email address will not be published. Required fields are marked *