ಕೊಪ್ಪಳ.13.ಜೂನ್25:- ಕೊಪ್ಪಳ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110/33/11 ಕೆ.ವಿ ಎಂಯುಎಸ್ಎಸ್ ಹಿರೇಸಿಂಧೋಗಿ ಸ್ಟೇಷನ್‌ನ ತ್ರೈಮಾಸಿಕ ನಿರ್ವಹಣೆ ಕಾಮಗಾರಿ (ಮೆಂಟೆನನ್ಸ್) ಕೆಲಸ ನಡೆಸುತ್ತಿರುವ ಪ್ರಯುಕ್ತ ಈ ಸ್ಟೇಷನ್‌ಗೆ ಒಳಪಡುವ ವಿವಿಧ ಫೀಡರ್‌ಗಳಲ್ಲಿ ಜೂನ್ 16 ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಅಂದು 110/33/11 ಕೆ.ವಿ ಎಂಯುಎಸ್ಎಸ್ ಹಿರೇಸಿಂಧೋಗಿ ಸ್ಟೇಷನ್‌ಗೆ ಒಳಪಡುವ ಮಾರ್ಗಗಳಾದ ಎಫ್-1 ಬಿಕನಳ್ಳಿ ಎನ್.ಜೆ.ವೈ., ಎಫ್-2 ಹಂದ್ರಾಳ, ಎಫ್-3 ಗುನ್ನಳ್ಳಿ ಎನ್.ಜೆ.ವೈ., ಎಫ್-4 ವದಗನಾಳ, ಎಫ್-5 ಕೋಳೂರು, ಎಫ್ -6 ಚಿಕ್ಕಸಿಂದೋಗಿ, ಎಫ್-7 ಬೂದಿಹಾಳ, ಎಫ್-8 ಗೊಂಡಬಾಳ ಎಮ್.ಐ., ಎಫ್-9 ಗೊಂಡಬಾಳ, ಎಫ್-10 ಹಿರೇಸಿಂಧೋಗಿ ಹಾಗೂ ಎಫ್-11 ಮೈನಳ್ಳಿ, ಈ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು,ಸಾರ್ವಜನಿಕರು ಸಹಕರಿಸಬೇಕು. ವಿದ್ಯುತ್ ನಿರ್ವಹಣೆ ಕಾಮಗಾರಿಯು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು.
ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಕೋರಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…