ಕೊಪ್ಪಳ.01.ಜುಲೈ.25:- ಕೊಪ್ಪಳ ನಗರಸಭೆಯ ಸನ್ 2025-26ನೇ ಸಾಲಿನ ವಿವಿಧ ಯೋಜನೆಗಳಡಿ ಶಸ್ತçಚಿಕಿತ್ಸೆಗೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರಸಭೆಯ ಶೇ.24.10 ರ ಯೋಜನೆಯ ನಗರಸಭೆ ನಿಧಿ ಅನುದಾನದಡಿ ಶೇ.40 ರಷ್ಟು ವ್ಯಕ್ತಿಸಂಬoಧಿತ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಜನಾಂಗದವರಿಗೆ ಹಾಗೂ ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮತ್ತು ಶೇ.7.25 ರ ಎಸ್.ಎಫ್.ಸಿ ಹಾಗೂ ನಗರಸಭೆ ನಿಧಿ ಯೋಜನೆ ಅನುದಾನದಡಿ ಶೇ.40 ರಷ್ಟು ವ್ಯಕ್ತಿಸಂಬoಧಿತ ಕಾರ್ಯಕ್ರಮದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಹಿಂದುಳಿದ ವರ್ಗಗಳ ಜನಾಂಗದವರಿಗೆ ಶಸ್ತç ಚಿಕಿತ್ಸೆಗೆ ಸಹಾಯಧನ ನೀಡಲಾಗುತ್ತದೆ.
ಸೌಲಭ್ಯ ಪಡೆಯಲು ಫಲಾನುಭವಿಗಳು ಕೊಪ್ಪಳ ನಗರದ ನಿವಾಸಿಯಾಗಿರಬೇಕು. ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶಸ್ತç ಚಿಕಿತ್ಸೆಗಾಗಿ ಹೊಂದಿದ ಪ್ರಮಾಣ ಪತ್ರ ಮತ್ತು ಬಿಲ್‌ಗಳು, 2 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್, ರೇಶನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಪುಸ್ತಕಗಳ ಪ್ರತಿಗಳೊಂದಿಗೆ ಜುಲೈ 31 ರೊಳಗೆ ನಗರಸಭೆ ಕಾರ್ಯಾಲಯಕ್ಕೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
ಅವಧಿ ಮೀರಿ ಬಂದ ಹಾಗೂ ಅಪೂರ್ಣ ದಾಖಲಾತಿ ಹೊಂದಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.