ಕೊಪ್ಪಳ ವಿಶ್ವವಿದ್ಯಾಲಯ ಮೌಲ್ಯಮಾಪನ, ಅತಿಥಿ ಉಪನ್ಯಾಸಕರಿಂದ ಬಹಿಷ್ಕಾರ.!

ಗಂಗಾವತಿ.06.ಫೆ.25:- ಗಂಗಾವತಿ ಕೊಪ್ಪಳ ವಿಶ್ವವಿದ್ಯಾಲಯ  ಮೌಲ್ಯಮಾಪನದ ಸಂಭಾವನೆ ಪಾವತಿಸದ ಕಾರಣ ವಿದ್ಯಾನಿಕೇತನ ಪದವಿ ಮಹಾವಿದ್ಯಾಲಯದಲ್ಲಿ ನಡೆಯುವ 1 ನೇ ಮತ್ತು 3ನೇ ಸೆಮಿಸ್ಟರ್ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸಮಯದಲ್ಲಿ ಅತಿಥಿ ಉಪನ್ಯಾಸಕರು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ.

ಹೋದ್ ವರ್ಷ ಸಂಭಾವನೆ ಬಿಡುಗಡೆ ಮಾಡಬೇಕು ಎಂದು ತಾಲ್ಲೂಕು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ಸದಸ್ಯರು ಮಂಗಳವಾರ ಮೌಲ್ಯಮಾಪನ ಕೇಂದ್ರದ ಕಸ್ಟೋಡಿಯನ್ ಡಿ.ಎಂ.ಅಭಿಷೇಕ ಅವರಿಗೆ ಮನವಿ ಸಲ್ಲಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ,’3 ತಿಂಗಳುಗಳ ಹಿಂದೆ ಪದವಿ ಮೊದಲನೇ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಯ ಮೌಲ್ಯಮಾಪನ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಈವರೆಗೂ ಸಂಭಾವನೆ ಪಾವತಿ ಮಾಡಿಲ್ಲ’ ಎಂದು ತಿಳಿಸಿದರು.

‘ಕಳೆದ ಬಾರಿ 155-210 ಅತಿಥಿ ಉಪನ್ಯಾಸಕರು 35 ರಿಂದ 50 ದಿನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ. ಮೌಲ್ಯಮಾಪನದ ಸಂಭಾವನೆ ನಯಾಪೈಸೆ ಪಾವತಿ ಮಾಡಿಲ್ಲ.

ಇದೀಗ 1 ಮತ್ತು 3ನೇ ಸೆಮಿಸ್ಟರ್‌ನ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ಸಂಭಾವನೆ ಪಾವತಿಸಿದ ಹಿನ್ನೆಲೆಯಲ್ಲಿ, ಅತಿಥಿ ಉಪನ್ಯಾಸಕರೆಲ್ಲರೂ ಒಮ್ಮತವಾಗಿ ನಿರ್ಣಯ ಕೈಗೊಂಡು ಮೌಲ್ಯಮಾಪನ ಬಹಿಷ್ಕರಿಸಲಾಗುತ್ತಿದೆ’ ಎಂದರು.

ಅತಿಥಿ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಗುಂಡೂರು ಪವನಕುಮಾರ, ಪದಾಧಿಕಾರಿಗಳಾದ ಬಸವರಾಜ ಗೌಡನಬಾವಿ, ಸುರೇಶ, ಮಂಜುನಾಥ ಖಾರದಪುಡಿ ಹಾಗೂ ಗೋಪಾಲ ಉಪಸ್ಥಿತರಿದ್ದರು.

ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪಂಚಾಕ್ಷರಯ್ಯ ಹಿರೇಮಠ ಮಾತನಾಡಿ,’3 ತಿಂಗಳುಗಳ ಹಿಂದೆ ಪದವಿ ಮೊದಲನೇ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಯ ಮೌಲ್ಯಮಾಪನ ಮಾಡಲಾಗಿದೆ. ಕೊಪ್ಪಳ ವಿಶ್ವವಿದ್ಯಾಲಯ ಈವರೆಗೂ ಸಂಭಾವನೆ ಪಾವತಿ ಮಾಡಿಲ್ಲ’ಅಂದು ಮಾಹಿತಿ ನೀಡಿದರು

prajaprabhat

Recent Posts

ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…

42 minutes ago

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

9 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

13 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

15 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

15 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

15 hours ago