ಕೊಪ್ಪಳ.28.ಜುಲೈ 25:- ಕೊಪ್ಪಳ ವಿಶ್ವವಿದ್ಯಾಲಯದಿಂದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪ್ರದರ್ಶನ ಕಲೆ, ಮಹಿಳಾ ಅಧ್ಯಯನ ವಿಭಾಗ, ಪತ್ರಿಕೋದ್ಯಮ, ಎಂ.ಕಾಂ., ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ, ಗಂಗಾವತಿ ಸ್ನಾತಕೋತ್ತರ ಕೇಂದ್ರಗಳು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಸೀಟುಗಳ ಪ್ರವೇಶಾತಿಯನ್ನು ಯುಯುಸಿಎಂಎಸ್ https://uucms.karnataka.gov.in/ ತಂತ್ರಾಂಶದ ಮುಖಾಂತರ ನೀಡಲಾಗುತ್ತಿದ್ದು, ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಈ ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಗಾಗಿ, ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ತಳಕಲ್ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಯಲಬುರ್ಗಾ ಮತ್ತು ಗಂಗಾವತಿಗಳ ಸ್ನಾತಕೋತ್ತರ ಕೇಂದ್ರಗಳಿಗೆ, ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.