ಕೊಪ್ಪಳ ವಿಶ್ವವಿದ್ಯಾಲಯ: ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ.28.ಜುಲೈ 25:- ಕೊಪ್ಪಳ ವಿಶ್ವವಿದ್ಯಾಲಯದಿಂದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2025-26ನೇ ಸಾಲಿನ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪ್ರದರ್ಶನ ಕಲೆ, ಮಹಿಳಾ ಅಧ್ಯಯನ ವಿಭಾಗ, ಪತ್ರಿಕೋದ್ಯಮ, ಎಂ.ಕಾಂ., ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ, ಗಂಗಾವತಿ ಸ್ನಾತಕೋತ್ತರ ಕೇಂದ್ರಗಳು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿ ಸೀಟುಗಳ ಪ್ರವೇಶಾತಿಯನ್ನು ಯುಯುಸಿಎಂಎಸ್ https://uucms.karnataka.gov.in/ ತಂತ್ರಾಂಶದ ಮುಖಾಂತರ ನೀಡಲಾಗುತ್ತಿದ್ದು, ಆಸಕ್ತಿಯುಳ್ಳ ಅರ್ಹ ವಿದ್ಯಾರ್ಥಿಗಳು ಈ ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 20 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಗಾಗಿ, ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ತಳಕಲ್ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, 4ನೇ ಮಹಡಿ, ಯಲಬುರ್ಗಾ ಮತ್ತು ಗಂಗಾವತಿಗಳ ಸ್ನಾತಕೋತ್ತರ ಕೇಂದ್ರಗಳಿಗೆ, ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

5 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

9 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

15 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

15 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

16 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

16 hours ago