ಕೊಪ್ಪಳ.15.ಜುಲೈ.25:- ಕೊಪ್ಪಳ ನಗರ ಸಮೀಪರುವ್ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಶಾಲೆಯ ಆವರಣದಲ್ಲಿಯೇ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡು ಗ್ರಾಮಸ್ಥರು ಸೋಮವಾರ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.
ಸಾವಂತ್ರಮ್ಮ ಮೆಳ್ಳಿಕೇರಿ (80) ಎಂಬ ಮಹಿಳೆ ಮೃತಪಟ್ಟಿದ್ದು, ಹಿಂದೂಗಳ ಅಂತಿಮ ಸಂಸ್ಕಾರ ಸಲ್ಲಿಸಲು ಜಾಗ ಇಲ್ಲದಿರುವುದರಿಂದ ಕುಟುಂಬಸ್ಥರು ಅಂತ್ಯಕ್ರಿಯೆಗೆ ಪರದಾಡುವಂತಾಯಿತು.
ಸ್ಮಶಾನ ಸೌಲಭ್ಯ ಕಲ್ಪಿಸುವಂತೆ ಅನೇಕ ಬಾರಿ ಮನವಿ ಮಾಡಿದ್ದರೂ ಬೇಡಿಕೆ ಈಡೇರಿರಲಿಲ್ಲ. ಸಾವಂತ್ರಮ್ಮ ಅವರಿಗೆ ಯಾವುದೇ ಜಮೀನು ಇಲ್ಲದ ಕಾರಣ ಅನಿವಾರ್ಯವಾಗಿ ರಸ್ತೆ ಮಧ್ಯದಲ್ಲಿಯೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದರು.
ಗ್ರಾಮಸ್ಥರು ಶಾಲೆ ಮುಂಭಾಗದ ರಸ್ತೆಯಲ್ಲಿ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆ ಮಾಡುವುದಾಗಿ ಪಟ್ಟು ಹಿಡಿದಾಗ ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ ಹಾಗೂ ಪೊಲೀಸರು ಗ್ರಾಮಕ್ಕೆ ದೌಡಾಯಿಸಿದರು.
‘ಶವ ಸಂಸ್ಕಾರಕ್ಕೆ ಜಾಗವಿಲ್ಲ. ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸಿಲ್ಲ. ಈಗ ಬಂದು ಸಮಾಧಾನ ಮಾಡಬೇಡಿ’ ಎಂದು ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೆಲ ಹೊತ್ತು ಮಾತಿನ ಚಕಮಕಿಯೂ ನಡೆಯಿತು.
ಅಧಿಕಾರಿಗಳು ಹಾಗೂ ಪೊಲೀಸರ ಮನವೊಲಿಕೆ ಬಳಿಕ ಹಳ್ಳಕ್ಕೆ ತೆರಳುವ ರಸ್ತೆಯ ಬದಿಯಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…