ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳ. ಕೋವಿಡ್ ಟೆಸ್ಟಿಂಗ್ ಅನಿವಾರ್ಯ.!

ಬೆಂಗಳೂರು.26.ಮೇ.25:- ರಾಜ್ಯದಲ್ಲಿ ಕೋವಿಡ್‌ಗೆ ವ್ಯಕ್ತಿಯೊಬ್ಬರು ಬಲಿಯಾದ ಬೆನ್ನಲ್ಲೇ, ಸೋಂಕಿನ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೊಳಪಡಿಸಲು ಸರ್ಕಾರ ಸೂಚಿಸಿದೆ.

ಈ ನಡುವೆ ರಾಜ್ಯದಲ್ಲಿ ಸೋಂಕು ಪೀಡಿತರ ಸಂಖ್ಯೆ 47ಕ್ಕೆ ಏರಿಕೆ ಆಗಿರುವುದು ಕೊಂಚ ಆತಂಕ ಮೂಡಿಸಿರುವ ನಡುವೆಯೇ ಬೆಂಗಳೂರು ಸೇರಿ 10 ಕಡೆ ಕೋವಿಡ್ ಟೆಸ್ಟಿಂಗ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಾಜ್ಯದಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 47 ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ ಬೆಂಗಳೂರು ಒಂದರಲ್ಲೇ 32 ಪ್ರಕರಣ ದಾಖಲಾಗಿವೆ.

ಕೋವಿಡ್ -19 ರ ತಪಾಸಣಾ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ಪರೀಕ್ಷಾ ಮಾದರಿಗಳನ್ನು ನಿಗದಿಪಡಿಸಿದ ಪ್ರಯೋಗಶಾಲೆಗಳಿಗೆ ಪರೀಕ್ಷೆಗಾಗಿ ಸಲ್ಲಿಸುವ ಕುರಿತು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, RT-PCR & RAT ಕೋವಿಡ್-19 ರ ಪರೀಕ್ಷೆ ನಡೆಸಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯದಂತೆ ದಿನ ನಿತ್ಯ 150 ರಿಂದ 200 ಪರೀಕ್ಷೆಗೆ ನಿಗದಿಪಡಿಸಲಾಗಿದ್ದು, ಎಲ್ಲಾ SARI ಪ್ರಕರಣಗಳಿಗೆ ಕೋವಿಡ್ ಸೋಂಕನ್ನು ಧೃಡ ಪಡಿಸಿಕೊಳ್ಳಲು RT-PCR ಪರೀಕ್ಷೆಗೆ ಕಡ್ಡಾಯವಾಗಿ ಒಳಪಡಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First In First Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು.

ಎಲ್ಲಾ SARI ಪ್ರಕರಣಗಳಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
ವಯೋವೃದ್ಧರಲ್ಲಿ ಮಕ್ಕಳಲ್ಲಿ, ಗರ್ಭಿಣಿ ಸ್ತ್ರೀಯಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆ ನಡೆಸುವುದು.
ಅನುಬಂಧ-1ರಂತೆ ಕೋವಿಡ್-19ರ ಪರೀಕ್ಷಾ ಮಾದರಿಯನ್ನು ಪ್ರಯೋಗಶಾಲೆಗಳಿಗೆ ಅದೇ ದಿನ ತಲುಪುವಂತೆ ಕ್ರಮವಹಿಸುವುದು.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

2 hours ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

2 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

2 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

2 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

2 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

2 hours ago