Home » ಲೈವ್ ನ್ಯೂಸ್ » ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ರಾಯಚೂರು.08.ಜುಲೈ 26: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳವು ಕಲಬುರಗಿಯಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಸಂಸ್ಥೆ ನಡೆಸುತ್ತಿದ್ದು. ಈ ತರಬೇತಿ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ/ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಜುಲೈ-2026 ರಿಂದ ಪ್ರಾರಂಭವಾಗುತ್ತಿದ್ದು. ಈ ತರಬೇತಿಯನ್ನು ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ತರಬೇತಿಯನ್ನು ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.

ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರುತ್ತದೆ. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ ಪರಿಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ 500 ರೂ.ಶಿಷ್ಯವೇತನವನ್ನು ನೀಡಲಾಗುವುದು.


ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ವಿಶೇಷ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿಯನ್ನು ಸಹ ನೀಡಲಾಗುವುದು.


ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗಳ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ಅಭ್ಯರ್ಥಿಗಳಿಗೆ ಮಾಹೆಯಾನ 600 ರೂ. ಶಿಷ್ಯವೇತನವನ್ನು ನೀಡಲಾಗುವುದು.


ಡಿ.ಸಿ.ಎಂ. ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿAದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್‌ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು. ಕೊಪ್ಪಳ ಮತ್ತು ಹೊಸಪೇಟ್) ಪಡೆಯಬಹುದು ತರಬೇತಿಯ ಅರ್ಜಿಯನ್ನು ಭರ್ತಿಮಾಡಿ 2026ರ ಜುಲೈ 15ರೊಳಗಾಗಿ ಕಲಬುರಗಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದಾಗಿದೆ.


ಆಸಕ್ತರು ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ- ಆಪರೇಟಿವ್ ಮ್ಯಾನೇಜ್ ಮೆಂಟ್, ಆದರ್ಶನಗರ, ಪ್ರಗತಿ ಕಾಲೋನಿ, ಸೇಡಂ. ರಸ್ತೆ,-585 105ಗೆ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ದೂರವಾರಣಿ ಸಂಖ್ಯೆ: 08472-245340/ 9916726886/ 9742307153/ 9113916753ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology