ಕೌಶಲ್ಯಾಭಿವೃದ್ದಿ ತರಬೇತಿಗೆ ಹಾಗೂ ಸ್ಟೈಪೆಂಡ್’ಗೇ ಅರ್ಜಿ ಆಹ್ವಾನ

ಬೆಂಗಳೂರು ಗ್ರಾ.ಜಿ.12.ಜೂನ್.25:- 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು  ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ತರಬೇತಿ ಹಂತದಲ್ಲಿ ಒದಗಿಸುವ ಸೌಲಭ್ಯಗಳು :

ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸ ಕಾತರಿಯಾಗಿರುವುದು.

ತರಬೇತಿ ಪಡೆಯುವ ವೇಳೆ ರೂ.2000/- ಗಳು ಮಾಹೆಯಾನ ಸ್ಟೈಪೆಂಡ್ ನೀಡಲಾಗುವುದು.

ತರಬೇತಿ ಹಾಜರಾಗುವವರಿಗೆ ವಸತಿ, ಊಟ ಹಾಗೂ ಸಮವಸ್ತ್ರ ನೀಡಲಾಗುವುದು.

ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್ ಗಳಲ್ಲಿ ಕೆಲಸದ ನೈಜ ಅನುಭವ ಸಹ ನೀಡಲಾಗುವುದು.

IHM,ಬೆಂಗಳೂರು ಹಾಗೂ FCI ಮೈಸೂರು ಸಂಸ್ಥೆಗಳು ಪ್ರತಿಷ್ಠಿತ ಆತಿಥ್ಯ ಕ್ಷೇತ್ರದಲ್ಲಿ ತರಬೇತಿ ನೀಡುವ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾಗಿದ್ದು, ಈ ಸಂಸ್ಥೆಗಳಿಂದ ತರಬೇತಿ ನೀಡಿ ಪ್ರಮಾಣ ಪತ್ರ ನೀಡುವುದರಿಂದ ರಾಜ್ಯದೊಳಗೆ ಅಲ್ಲದೇ ದೇಶದ ಯಾವುದೇ ಭಾಗದ ಹೋಟೆಲ್ ಉದ್ಯಮದಲ್ಲಿ ಕೆಲಸ ಖಾತರಿಯಾಗುವುದು.

ತರಬೇತಿಗಳು:

Food and Beverage Service Steward) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 4 ತಿಂಗಳ ತರಬೇತಿಯಿದ್ದು,SSLC ಅಥವಾ ಹತ್ತನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ಬಹು ತಿನಿಸು ಅಡುಗೆ (Multi Cuisine Cook) ಈ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 5 ತಿಂಗಳ ತರಬೇತಿಯಿದ್ದು, 8ನೇ ತರಗತಿ ಉತ್ತೀರ್ಣವಾಗಿರಬೇಕು, 20 ರಿಂದ 45 ರ ವಯಸ್ಸಿನವರಾಗಿರಬೇಕು.

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 19 ರಂದು 5:30ರ ಒಳಗೆ ಕ ಕಚೇರಿಯ ಸಮಯದಲ್ಲಿ ಸಲ್ಲಿಸಬೇಕು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

2 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

8 hours ago

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ; ಶಾರುಖ್, ಮ್ಯಾಸ್ಸಿ ಅತ್ಯುತ್ತಮ ನಟ, ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ

ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…

8 hours ago

ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಮನ್ಸುಖ್ಸ   ಸನ್ಮಾನಿಸಿದರು

ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…

8 hours ago

ಕೇಂದ್ರ ಸಚಿವ ಗಡ್ಕರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…

9 hours ago

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…

14 hours ago