ಕೌಶಲ ರಹಿತ್ ಕೌಶಲ ಸಹಿತ್ಕಾರ್ಮಿಕರಿಗೆ ಕನಿಷ್ಠ ವೇತನ ಹೆಚ್ಚಳ: ಕರ್ನಾಟಕ ಸರ್ಕಾರ

ಬೆಂಗಳೂರು.03.ಎಪ್ರಿಲ್.25:- ರಾಜ್ಯ ಸರ್ಕಾರ ಕಾರ್ಮಿಕ್ ರಹಿತ್ ಕೌಶಲ ಸಹಿತ್ ಕೌಶಲಯುಕ್ತ  ಕಾರ್ಮಿಕರ ಕನಿಷ್ಠ ವೇತನ (Minimum wages) ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಉದ್ದೇಶಿಸಿದ್ದು, ಮುಂದಿನ ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಒಂದು ವೇಳೆ, ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದ್ದೇ ಆದಲ್ಲಿ, ಕಾರ್ಮಿಕರಿಗೆ ದೇಶದಲ್ಲಿಯೇ ಅತಿ ಹೆಚ್ಚು ಕನಿಷ್ಠ ವೇತನ ನೀಡುವ ರಾಜ್ಯ ಎಂದು ಕರ್ನಾಟಕ ಗುರುತಿಸಿಕೊಳ್ಳಲಿದೆ.

ಒಟ್ಟು 82 ವಿವಿಧ ಕೆಲಸಗಳಿಗೆ ಕಾರ್ಮಿಕರ ಕನಿಷ್ಠ ವೇತನ ಅನ್ವಯವಾಗಲಿದೆ. ಈ ಸಂಬಂಧ 2022 ರಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

ಕರಡು ಅಧಿಸೂಚನೆಯನ್ನು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಲಾಗುವುದು. ಮಂಡಳಿಯು ಅನುಮೋದನೆ ನೀಡಿದ್ದೇ ಆದಲ್ಲಿ ಮುಂದಿನ ಒಂದೆರಡು ವಾರಗಳಲ್ಲಿ ಸರ್ಕಾರ ಅಧಿವೇಶನ ಹೊರಡಿಸುವ ನಿರೀಕ್ಷೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. ವೇತನ ಪರಿಷ್ಕರಣೆಯಿಂದ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರಿಗೆ ಪ್ರಯೋಜನವಾಗಲಿದೆ.

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ವಿವರ

ಪ್ರಸ್ತುತ ಕರ್ನಾಟಕದಲ್ಲಿ ಕೌಶಲ ಸಹಿತ ಮತ್ತು ಕೌಶಲರಹಿತ ಕಾರ್ಮಿಕರ ಕನಿಷ್ಠ ವೇತನ ತಿಂಗಳಿಗೆ 12,000 ಇದೆ. ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಇದು 20,000 ರೂಪಾಯಿಗೆ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಸೇರಿದಂತೆ ವಿವಿಧ ವಲಯಗಳ ಸುಮಾರು 1.7 ಕೋಟಿ ಕಾರ್ಮಿಕರಿದ್ದಾರೆ.

ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಕನಿಷ್ಠ ವೇತನ ಕಡಿಮೆ ಇರಬೇಕೆಂದು ಉದ್ಯೋಗದಾತರು ಬಯಸಿದ್ದರು ನಾವು ಎಲ್ಲರ ಹಿತಾಸಕ್ತಿಯನ್ನು ಪರಿಗಣಿಸುತ್ತೇವೆ ಎಂದು ಕಾರ್ಮಿಕ ಇಲಾಖೆ ಮೂಲಗಳು ತಿಳಿಸಿವೆ. ಮತ್ತೊಂದೆಡೆ ಕನಿಷ್ಠ ವೇತನವನ್ನು ತಿಂಗಳಿಗೆ 35000 ರೂಪಾಯಿಗೆ ಹೆಚ್ಚಿಸಬೇಕೆಂದು ಕಾರ್ಮಿಕ ಸಂಘಟನೆಗಳು ಆಗ್ರಹಿಸಿವೆ.

ಪ್ರಸ್ತುತ ನವದೆಹಲಿಯಲ್ಲಿ ಕಾರ್ಮಿಕರ ಕನಿಷ್ಠ ವೇತನ, ದೇಶದಲ್ಲಿ ಹೆಚ್ಚಾಗಿದೆ. ಅಲ್ಲಿ ಕನಿಷ್ಠ ವೇತನ ತಿಂಗಳಿಗೆ 17000 ರೂ.ನಿಂದ 23,000 ಸಾವಿರ ರೂಪಾಯಿವರೆಗೆ ಇದೆ.

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

7 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

10 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

16 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

57 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago