ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ!

13 ಡಿಸೆಂಬರ್24 :- ಬೀದರ್ ನಗರದಲ್ಲಿ ಇತ್ತೀಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ಕಾರ್ಯಕ್ರಮದ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಧ್ಯಾನೇಶ್ವರ ನಿರಗುಡೆ ಚಾಲನೆ ನೀಡಿದರು.


ಈ ಜಾಥಾವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಂಘಟಿತ ಮತ್ತು ಸಹಯೋಗದ ಪ್ರಯತ್ನದ ಮೂಲಕ ದೇಶದ ಹೆಚ್ಚಿನ ಆದ್ಯತೆಯ 347 ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕ ರಾಜ್ಯದಾದ್ಯಂತ ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕ್ಷಯರೋಗ ನಿರ್ಮೂಲನೆ ಕುರಿತು 100 ದಿನಗಳ ತೀವ್ರ ಪ್ರಚಾರ ( 100 days intensified campaign on TB elimination) ಕಾರ್ಯಕ್ರಮದ ಅಭಿಯಾನವನ್ನು ಈ ಅಭಿಯಾನದ ಗುರಿಯು ಕಾರ್ಯಕ್ರಮದ ಚಟುವಟಿಕೆಗಳನ್ನು ತೀವ್ರಗೊಳಿಸುವುದು, ದುರ್ಬಲ ಜನ ಸಂಖ್ಯೆಯಲ್ಲಿ ಸಕ್ರಿಯ ಕ್ಷಯ ಪ್ರಕರಣಗಳನ್ನು ಕಂಡುಹಿಡಿಯುವುದು, ಆರಂಭಿಕ ರೋಗ ನಿರ್ಣಯ ಮಾಡಿ ತ್ವರಿತ ಚಿಕಿತ್ಸೆ ಪ್ರಾರಂಭಿಸುವುದು, ಪೌಷ್ಠಿಕ ಆಹಾರದ ಆರೈಕೆ ಕಲ್ಪಿಸುವುದು, ದುರ್ಬಲ ಪ್ರದೇಶಗಳಲ್ಲಿ ಕ್ಷಯರೋಗ ಜಾಗೃತಿ ವೃದ್ಧಿಸುವುದು ಮತ್ತು ಕ್ಷಯರೋಗದ ತೀವ್ರತೆಯನ್ನು ಕಡಿಮೆಗೊಳಿಸುವುದಾಗಿದೆ.


ಈ ಜಾಥಾವು ನಗರದ ರಾಜೀವ ಗಾಂಧಿ ಚೌಕ, ಅಂಬೆಡ್ಕರ್ ವೃತ, ಶಿವಾಜಿ ವೃತ, ಜಿಲ್ಲಾಧಿಕಾರಿಗಳ ಕಛೇರಿ, ಹರಳಯ್ಯ ವೃತ ಮಾರ್ಗವಾಗಿ ತೆರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ಮುಕ್ತಾಯಗೊಂಡಿತು.


ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಟಿ.ಬಿ ಚಾಂಪಿಯನ್ ಅವರನ್ನು ಸನ್ಮಾಸಿಲಾಯಿತ್ತು ಮತ್ತು ಮೂರು ಹೊಸ ರೋಗಿಗಳಿಗೆ ರವಿ ಪ್ರಭಾ ಪ್ರಯೋಗ ಶಾಲಾ ತಂತ್ರಜ್ಞ ಅಧಿಕಾರಿಯವರು ದತ್ತು ಪಡೆದು 6 ತಿಂಗಳವರೆಗೆ ಪೌಷ್ಠಿಕ ಆಹಾರ ಕಿಟ್ ವಿತರಣೆಮಾಡಿದರು.


ಈ ಕಾರ್ಯಕ್ರಮದಲ್ಲಿ ಡಾ. ಅನೀಲಕುಮಾರ ಚಿಂತಾಮಣಿ, ಡಾ. ರಾಜಶೇಖರ ಪಾಟೀಲ್ ಜಿಲ್ಲಾ ಮಲೇರಿಯಾ ಅಧಿಕಾರಿಗಳು, ಡಾ: ಕಿರಣ ಪಾಟೀಲ್ ಜಿಲ್ಲಾ ಕುಷ್ಠರೋಗ ಅಧಿಕಾರಿಗಳು, ಡಾ: ದೀಲಿಪ ಡೋಂಗರೆ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಡಾ. ಸಂಗಾರಡ್ಡಿ ತಾಲೂಕ ಆರೋಗ್ಯ ಅಧಿಕಾರಿಗಳು ಬೀದರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಿಬ್ಬಂದಿಗಳು ಮತ್ತು ಜಿಲ್ಲಾ ಕ್ಷಯರೋಗ ಕಛೇರಿ ಸಿಬ್ಬಂದಿಗಳು ಭಾಗವಹಿಸಿದರು. ಕಾರ್ಯಕ್ರಮದ ನಿರೂಪಣೆ ಟಿ.ಎಂ. ಮಚ್ಚೆ ಮಾಡಿದರು.

Source: www.prajaprabhat.com

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

4 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

8 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

14 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

14 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

15 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

15 hours ago