ಕ್ಷಯ ರೋಗ ಕಚೇರಿ ಉದ್ಘಾಟನೆ,ಕ್ಷಯ ರೋಗ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸಲಿ-ಸಚಿವ ಈಶ್ವರ ಖಂಡ್ರೆ.


ಬೀದರ.13.ಫೆಬ್ರುವರಿ.25:- ವಿಶ್ವ ಸಂಸ್ಥೆಯು 2030 ರೊಳಗಾಗಿ ವಿಶ್ವದಾದ್ಯಂತ ಕ್ಷಯರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸನ್ನದ್ಧವಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಪಣತೊಟ್ಟು ಶ್ರಮಿಸಬೇಕೆಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.


ಬೀದರ ನಗರದಲ್ಲಿಂದು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬೀದರ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಕ್ಷಯರೋಗವು ಸಾಂಕ್ರಾಮಿಕ ರೋಗವಾಗಿದ್ದು ಸಾರ್ವಜನಿಕರು ಕೆಮ್ಮು, ಜ್ವರ ಸುದೀರ್ಘ ಕಾಲ ಇದ್ದಲ್ಲಿ ತಕ್ಷಣವೇ ಜಿಲ್ಲಾಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಬೇಕು.

ಹಲವು ದಶಕಗಳ ಹಿಂದೆ ಕ್ಷಯರೋಗ ಒಂದು ಮಹಾಮಾರಿ ಆಗಿತ್ತು. ಕ್ಷಯರೋಗ ಕಂಡುಬಂದಲ್ಲಿ ಅಂಥವರನ್ನು ಗ್ರಾಮದ ಹೊರಗೆ ವಾಸುತ್ತಿದ್ದರು. ಆದರೆ ಈಗ ಕ್ಷಯರೋಗಕ್ಕೆ ಉಚಿತ ಔಷಧಿ ಲಭ್ಯವಿದ್ದು ವಾಸಿಯಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.


ಬೀದರ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಕ್ಷಯರೋಗಗಳಿದ್ದು ಅನೇಕರು ವಾಸಿಯಾಗಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಷಯರೋಗಿಗಳನ್ನು ಪತ್ತೆ ಹಚ್ಚಿ ನಿವಾರಣೆಗೆ ಶ್ರಮಿಸಬೇಕೆಂದರು.


ಈ ಕಾರ್ಯಕ್ರಮದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಮಹ್ಮದ ಗೌಸ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ದ್ಯಾನೇಶ್ವರ ನಿರಗುಡೆ, ಕೆ.ಆರ್.ಐ.ಡಿ.ಎಲ್. ನ ಕಾರ್ಯನಿರ್ವಾಹಕ ಅಭಿಯಂತರರಾದ ಅಭಿಷೇಕ ಪೊಲಾ, ಜಿಲ್ಲಾ ಕ್ಷಯರೋಗ ಅಧಿಕಾರಿ ಅನಿಲಕುಮಾರ ಚಿಂತಾಮಣಿ ಸೇರಿದಂತೆ ವಿವಿಧ ಕಾರ್ಯಕ್ರಮ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

5 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

5 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

5 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

11 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

11 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

12 hours ago