10/06/2025 2:40 AM

Translate Language

Home » ಲೈವ್ ನ್ಯೂಸ್ » ಖರ್ಗೆರ ತ್ಯಾಗದ ಮಾತು ಅರ್ಥವಾಗಿಲ್ಲ.ಗೃಹ ಸಚಿವ ಡಾ. ಜಿ. ಪರಮೇಶ್ವರ

ಖರ್ಗೆರ ತ್ಯಾಗದ ಮಾತು ಅರ್ಥವಾಗಿಲ್ಲ.ಗೃಹ ಸಚಿವ ಡಾ. ಜಿ. ಪರಮೇಶ್ವರ

Facebook
X
WhatsApp
Telegram

ತುಮಕೂರು, 22.ಜನೆವರಿ.25:- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವದ ಬಗ್ಗೆ ಹೇಳಿರುವ ಮಾತು ಅರ್ಥ ಆಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನವರು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಮಾಡಿದ್ದಾರೆ. ಅಂತಹ ತ್ಯಾಗ, ಬಲಿದಾನ ಈಗಿನ ಆಧುನಿಕ ಸಮಾಜದಲ್ಲಿ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ತ್ಯಾಗದ ಮಾತು ಹೇಳಿರಬಹುದು ಎಂದರು.

ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ತ್ಯಾಗ ಕಡಿಮೆಯಾಗಿಲ್ಲ, ಇಡೀ ಸಮಾಜದಲ್ಲಿ ತ್ಯಾಗದ ಮನೋಭಾವನೆ ಕಡಿಮೆಯಾಗಿದೆ.

ಹಾಗೆಯೇ ಸ್ವಾಭಾವಿಕವಾಗಿ ಕಾಂಗ್ರೆಸ್‌ನಲ್ಲೂ ತ್ಯಾಗ ಮನೋಭಾವ ಕಡಿಮೆಯಾಗಿದೆ ಎಂದು ಹೇಳಿದರು.


ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿರುವ ವಿಚಾರದ ಬಗ್ಗೆ ಪತ್ರಕರ್ತರು ಪ್ರಸ್ತಾಪಿಸಿದಾಗ, ಶ್ರೀಮಠದಲ್ಲಿ ಯಾವುದೇ ರಾಜಕೀಯ ಮಾತನಾಡಲ್ಲ ಎಂದ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!