ತುಮಕೂರು, 22.ಜನೆವರಿ.25:- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತ್ಯಾಗ ಮಾಡುವ ಮನೋಭಾವದ ಬಗ್ಗೆ ಹೇಳಿರುವ ಮಾತು ಅರ್ಥ ಆಗಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್‌ನವರು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಮಾಡಿದ್ದಾರೆ. ಅಂತಹ ತ್ಯಾಗ, ಬಲಿದಾನ ಈಗಿನ ಆಧುನಿಕ ಸಮಾಜದಲ್ಲಿ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ತ್ಯಾಗದ ಮಾತು ಹೇಳಿರಬಹುದು ಎಂದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ತ್ಯಾಗ ಕಡಿಮೆಯಾಗಿಲ್ಲ, ಇಡೀ ಸಮಾಜದಲ್ಲಿ ತ್ಯಾಗದ ಮನೋಭಾವನೆ ಕಡಿಮೆಯಾಗಿದೆ.
ಹಾಗೆಯೇ ಸ್ವಾಭಾವಿಕವಾಗಿ ಕಾಂಗ್ರೆಸ್‌ನಲ್ಲೂ ತ್ಯಾಗ ಮನೋಭಾವ ಕಡಿಮೆಯಾಗಿದೆ ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಅವಕಾಶಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿಕೆ ನೀಡಿರುವ ವಿಚಾರದ ಬಗ್ಗೆ ಪತ್ರಕರ್ತರು ಪ್ರಸ್ತಾಪಿಸಿದಾಗ, ಶ್ರೀಮಠದಲ್ಲಿ ಯಾವುದೇ ರಾಜಕೀಯ ಮಾತನಾಡಲ್ಲ ಎಂದ
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…