ಬೆಂಗಳೂರು.15.ಜನವರಿ.25:- ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿ, ಬೆಂಗಳೂರು ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಆದೇಶವನ್ನು ಹೊರಡಿಸಿದೆ. ಈ ಪ್ರಕ್ರಿಯೆಯನ್ನು ತಂತ್ರಾಂಶದ ಮೂಲಕ ಮಾಡಬೇಕು ಎಂದು ಸೂಚಿಸಲಾಗಿರುತ್ತದೆ.
ಈ ತಂತ್ರಾಂಶ ಹೇಗೆ ಕಾರ್ಯ ನಿರ್ವಹಣೆ ಮಾಡಲಿದೆ? ಎಂದು ತಿಳಿಸಲಾಗಿದೆ.
ಈ ಆದೇಶ ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸರ್ಕಾರದ ಪತ್ರ, ಸುತ್ತೋಲೆಗಳನ್ನು ಉಲ್ಲೇಖಿಸಲಾಗಿದೆ.
ಕರ್ನಾಟಕ ಪಬ್ಲಿಕ್ ಶಾಲೆ: ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭ
ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಪತ್ರ ದಿನಾಂಕ 07/08/2024ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ 01.01.2016 ರಿಂದ 31.12.2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ. ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ.
ಸರ್ಕಾರದ ಆದೇಶ ದಿನಾಂಕ 07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಅವರ ಟಿಪ್ಪಣಿ ದಿನಾಂಕ 24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ.
ಈ ತಂತ್ರಾಂಶವು 6 ಹಂತಗಳನ್ನು ಒಳಗೊಂಡಿದೆ
👉ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವುದು.
👉ಆಡಳಿತ ಮಂಡಳಿಯಿಂದ ಖಾಲಿ ಹುದ್ದೆ ಭರ್ತಿಗೆ ಅನುಮತಿ ಕೋರಿ ಸಂಬಂಧಿಸಿದ
ಆಯುಕ್ತಾಲಯಗಳಿಗೆ ಪ್ರಸ್ತಾವನೆ ಸಲ್ಲಿಕೆ.
ಸರ್ಕಾರಿ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರ ನೇಮಕಾತಿ: 2ನೇ ಹಂತದ ಹಂಚಿಕೆ ವಿವರ
*👉ಆಯಾ ಆಯುಕ್ತಾಲಯಗಳಲ್ಲಿ ಸಮಿತಿಗಳನ್ನು ರಚಿಸಿ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶಿಫಾರಸು ಮಾಡುವುದು. ಶಿಫಾರಸ್ಸು ಆಧರಿಸಿ ಖಾಲಿ ಹುದ್ದೆ ಭರ್ತಿಗೆ ಅನುಮತಿ ನೀಡುವುದು.
👉ಆಡಳಿತ ಮಂಡಳಿಗಳು ಅನುಮತಿಸಿದ ಹುದ್ದೆಗಳಿಗೆ ನಿಯಮಾನುಸಾರ ನೇಮಕಾತಿ ಪ್ರಕ್ರಿಯ ಕೈಗೊಂಡು ಸಂಬಂಧಿಸಿದ ಉಪ ನಿರ್ದೇಶಕರಿಗೆ ನೇಮಕಾತಿ ಅನುಮೋದನೆಗೆ ಆನ್‌ಲೈನ್‌ನಲ್ಲಿ ಪ್ರಸ್ತಾವನೆ ಸಲ್ಲಿಕೆ.
👉ಉಪ ನಿರ್ದೇಶಕರಿಂದ ಪರಿಶೀಲಿಸಿ ಸಂಬಂಧಿಸಿದ ಆಯುಕ್ತಾಲಯಗಳಿಗೆ ಅನ್‌ಲೈನ್‌ನಲ್ಲಿ ಪ್ರಸ್ತಾವನೆಗಳ ಸಲ್ಲಿಕೆ
👉ಸಂಬಂಧಿಸಿದ ಆಯುಕ್ತಾಲಯಗಳಿಂದ ಸರ್ಕಾರಕ್ಕೆ, ಆನ್‌ಲೈನ್‌ನಲ್ಲಿ ಅನುಮೋದನೆಗೆ ಸಲ್ಲಿಕೆ
ಪ್ರಸ್ತುತ ಮೇಲೆ ತಿಳಿಸಿರುವ 6 ಹಂತಗಳಲ್ಲಿ ಮೊದಲ ಎರಡು ಹಂತಗಳ ತಂತ್ರಾಂಶ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು ಉಳಿದ ಹಂತಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ಸರ್ಕಾರದ ಸುತ್ತೋಲೆ ದಿನಾಂಕ 25-11-2024ರಂದು ಎಲ್ಲಾ ನೇಮಕಾತಿ ಪ್ರಕ್ರಿಯೆಗಳಿಗೆ ಹೊಸದಾಗಿ ಅಧಿಸೂಚನೆ ಹೊರಡಿಸದಿರಲು ಆದೇಶಿಸಲಾಗಿದೆ. ಸದರಿ ಆದೇಶದಂತ ಮೊದಲ ಹಂತದ ತಂತ್ರಾಂಶ (BEO Login) ನ್ನು ಚಾಲ್ತಿಗೊಳಿಸುವುದನ್ನು ತಡೆಹಿಡಿದು, ಈ ಕುರಿತು ಸರ್ಕಾರಕ್ಕೆ, ಮಾರ್ಗದರ್ಶನ ಕೋರಲಾಗಿದೆ.
ಆದರ ವಿವಿಧ ಶಾಲಾ ಆಡಳಿತ ಮಂಡಳಿಗಳಿಂದ ಹಾಗೂ ಜನ ಪ್ರತಿನಿಧಿಗಳಿಂದ ಸರ್ಕಾರವು ದಿನಾಂಕ 07-08-2024ರಲ್ಲಿ ಆದೇಶ ಮಾಡಿದ್ದರೂ ಸದರಿ ಪ್ರಕ್ರಿಯೆಯನ್ನು ಪ್ರಾರಂಭಿಸಿಲ್ಲ ಎಂದು ತಿಳಿಸುತ್ತಾ ಪಕ್ರಿಯೆ ಪ್ರಾರಂಭಿಸಲು ಕೋರಿ ಮನವಿಗಳು ಸ್ವೀಕೃತವಾಗುತ್ತಲಿದೆ.
ಈ ಹಿನ್ನೆಲೆಯಲ್ಲಿ ತಂತ್ರಾಂಶದ ಮೊದಲ ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅನುದಾನಿತ ಶಾಲೆಗಳ ಮಂಜೂರಾದ/ ಕಾರ್ಯನಿರತ ಮತ್ತು ಅರ್ಹ ಖಾಲಿ ಹುದ್ದೆಗಳ ಮಾಹಿತಿ ಇಂದೀಕರಿಸುವ ಪ್ರಕ್ರಿಯೆ ಒಳಗೊಂಡಿದ್ದು ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗಧಿಪಡಿಸುವ ಪ್ರಕ್ರಿಯೆ ಇರುವುದಿಲ್ಲ.
ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆರವರನ್ನು ಕೋರಲಾಗಿದೆ.
ಈ ಹಂತದಲ್ಲಿ ಯಾವುದೇ ರೋಸ್ಟರ್ ಬಿಂದು ನಿಗದಿಪಡಿಸುವ ಪ್ರಕ್ರಿಯೆ ಇರುವುದಿಲ್ಲ. ಪ್ರಯುಕ್ತ ಮೊದಲ ಹಂತದ ತಂತ್ರಾಂಶ ಬಿಡುಗಡಗೆ ಅನುಮತಿ ನೀಡಲು ಕೋರಿದೆ ಎಂದು ಹೇಳಿದೆ.
ರಾಜ್ಯ ಸರ್ಕಾರ ಖಾಸಗಿ ಅನುದಾನಿತ ಪ್ರೌಡ್ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರೌಢ ಶಾಲಾ ಶಿಕ್ಶಣ ಇಲಾಖೆ ನಿರ್ಧರಿಸಿದೆ
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…