ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಹುದ್ದೆಗಳ ಭರ್ತಿಗೆ : ಸರ್ಕಾರ ಆದೇಶ.!

ಬೆಂಗಳೂರು.01.ಫೆ.25:- ರಾಜ್ಯದಲ್ಲಿ ಖಾಲಿಯಿರುವ ಖಾಸಗಿ ಅನುದಾನಿತ  ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ಖಾಲಿಯಿರುವ ಹುದ್ದೆಗಳನ್ನು ಶಿಪ್ರೇವೆ ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(2)ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ.

ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪ್ರಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ.

ಸದರಿ ಪ್ರಕ್ರಿಯೆಗೆ ಪೂರಕವಾಗಿ ಉಲ್ಲೇಖ3) ರ ಈ ಕಚೇರಿ ಸುತ್ತೋಲೆಯಂತೆ ಈಗಾಗಲೇ ಇ.ಐ, ಡಿ.ಎಸ್ ನಲ್ಲಿ ಖಾಸಗಿ ಅನುದಾನಿತ ಶಾಲೆಗಳ ಎಲ್ಲಾ ಬೋಧಕ ಮತ್ತು ಬೋಧಕೇತರ ನೌಕರರ ಮಾಹಿತಿಯನ್ನು ಇಂದೀಕರಿಸಲು ಸೂಚಿಸಲಾಗಿದ್ದು ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಅನುದಾನಿತ ಶಾಲೆಗಳ ಮಾಹಿತಿಯನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಇಂದೀಕರಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು,

ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ತಂತ್ರಾಂಶದ ಮೂಲಕ ವ್ಯವಹರಿಸಲು ಮೊದಲನೆ ಹಂತದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಮಂಜೂರಾದ, ಕಾರ್ಯನಿರ್ವಹಿಸುತ್ತಿರುವ ಖಾಲಿ ಹುದ್ದೆಗಳ ಮಾಹಿತಿಯನ್ನು ಅಪ್ಡೇಟ್ ಮಾಡುವ ಕಾರ್ಯವನ್ನು ಡಿ ಡಿ ಓ ಗಳಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಬೇಕಿರುತ್ತದೆ. ಸದರಿ ಕಾರ್ಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಎಸ್.ಎ.ಟಿ.ಎಸ್ ಲಾಗಿನ್ನಲ್ಲಿ ನಿರ್ವಹಿಸಲು ಕೆಳಕಂಡ ಕ್ರಮಗಳನ್ನು ಅನುಸರಿಸುವುದು.

1. ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಮಾಹಿತಿ ಮತ್ತು ಸಂಬಂಧಿಸಿದ ದಾಖಲೆಗಳನ್ನು (ಶಾಲಾ ಅನುದಾನಕ್ಕೆ ಒಳಪಟ್ಟ ಆದೇಶ, ಅನುದಾನ ಸಹಿತವಾಗಿ ಅನುಮೋದನೆಗೊಂಡ ಶಿಕ್ಷಕರ ಆದೇಶದ ಪ್ರತಿ, ಶಾಲಾ ಮಾನ್ಯತೆ ನವೀಕರಣ, ಸ್ಮಾಟ್ಸ್ ಇತ್ಯಾದಿ) ಸಂಗ್ರಹಿಸುವುದು.


2. ತಂತ್ರಾಂಶದಲ್ಲಿ ಲಾಗಿನ್ ಆದ ನಂತರ ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಮಾಹಿತಿಯು ಲಭ್ಯವಾಗುವುದು. ಯಾವುದೇ ಶಾಲೆಯ ಮಾಹಿತಿ ಇಲ್ಲದಿರುವುದು ಕಂಡುಬಂದಲ್ಲಿ ಎಸ್.ಎ.ಟಿ.ಎಸ್ ತಂತ್ರಾಂಶದಲ್ಲಿ ಸದರಿ ಶಾಲೆಯ ಮಾಹಿತಿಯನ್ನು ಪರಿಶೀಲಿಸಿ ಇಂದೀಕರಿಸುವುದು.


3. ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳ ಮಾಹಿತಿ ಲಭ್ಯವಿರುವುದನ್ನು ಖಚಿತಪಡಿಸಿಕೊಂಡ ನಂತರ ಶಾಲಾವಾರು ಮಾಹಿತಿ ಇಂದೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.

prajaprabhat

Recent Posts

ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು.

ಕೊಪ್ಪಳ.13.ಆಗಸ್ಟ್.25: ರಾಘವೇಂದ್ರ ಸ್ವಾಮಿಗಳ ೩೫೪ನೇ ಆರಾಧನಾ ಮಹೋತ್ಸವ ಅಂಗವಾಗಿ ಮಂಗಳವಾರ ಉತ್ತರಾಧನೆ ಜರುಗಿತು. ಆರಾಧನೆಯ ಕೊನೆಯ ದಿನವಾಗಿದ್ದರಿಂದ ಮಧ್ಯಾಹ್ನ ನಡೆದ…

14 minutes ago

ಪದವಿ ಕಾಲೇಜು 310 ಪ್ರಾಂಶುಪಾಲರ ನೇಮಕಾತಿ ಶೀಘ್ರವೇ.

ಬೆಂಗಳೂರು.13.ಆಗಸ್ಟ.25:- ರಾಜ್ಯ ಸರ್ಕಾರ ಹೊಸ 310 ಪ್ರಾಂಶುಪಾಲರ ಹುದ್ದೆಗಳಿಗೆ  ಶೀಘ್ರವೇ ಅರ್ಹರಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ ಪ್ರಥಮ ದರ್ಜೆ ಕಾಲೇಜುಗಳಿಗೆ…

1 hour ago

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/…

2 hours ago

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

10 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

10 hours ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

10 hours ago