ಖಾಸಗಿ ಅನುದಾನಿತ ಶಾಲಾ ವರ್ಗಾವಣೆ ಬಗ್ಗೆ ಸರ್ಕಾರದಿಂದ ಆದೇಶ.

ಬೆಂಗಳೂರು.28.ಮಾರ್ಚ್.25:-ಕರ್ಣಾಟಕ ರಾಜ್ಯ ಶಿಕ್ಷಣ ಇಲಾಖೆ. ಪ್ರಾಥಮಿಕ ಹಾಗೂ ಪ್ರೌಡ ಶಾಲಾ ಶಿಕ್ಷಕರ ವರ್ಗಾವಣೆ ನಿರೀಕ್ಷೆಯಲ್ಲಿರುವ  ಶಿಕ್ಷಕರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತಂತೆ ಆದೇಶ ಹೊರಡಿಸಿದೆ.

ಪ್ರತಿ ವರ್ಷದಂತೆ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಆಡಳಿತ ಮಂಡಳಿಯಿಂದ ನಡೆಯುತ್ತಿರುವಂತಹ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಆಡಳಿತ ಮಂಡಳಿಯ ಶಾಲೆಯಿಂದ ಮತ್ತೊಂದು ಆಡಳಿತ ಮಂಡಳಿಯ ಶಾಲೆಯಲ್ಲಿನ ಖಾಲಿ ಹುದ್ದೆಗಳಿಗೆ ಅನುದಾನಿತ ಶಿಕ್ಷಕರನ್ನು ಕೋರಿಕೆ/ಪರಸ್ಪರ ವರ್ಗಾಯಿಸಲು ಕೋರಿ ಆಡಳಿತ ಮಂಡಳಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮಗಳು-1999. ಕಲಂ-12ರಲ್ಲಿ ಅವಕಾಶ ಕಲ್ಪಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಕಾಲಾ ಆಡಳಿತ ಮಂಡಳಿಗಳು ತಮ್ಮ ಅಧೀನದಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿನ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು ಹಾಗೂ ಪ್ರಕ್ರಿಯೆ ಕೈಗೊಳ್ಳಲು ಕೆಳಕಂಡಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ವರ್ಗಾವಣೆ ಬಯಸಿರುವ ಶಾಲೆಯಲ್ಲಿ ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಅವಶ್ಯಕತೆಯ ಕುರಿತು ಖಚಿತಪಡಿಸಿಕೊಂಡು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರುಗಳು ನಿಯಮಾನುಸಾರ ಪ್ರಸ್ತಾವನೆಯನ್ನು ಪರಿಶೀಲಿಸಿ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ನೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸತಕ್ಕದ್ದು.


ಯಾವುದೇ ಉಪನಿರ್ದೇಶಕರುಗಳು ಅರ್ಹ ಪ್ರಸ್ತಾವನೆಗಳನ್ನು ಸಲ್ಲಿಸುವಂತಹ ಸಂದರ್ಭದಲ್ಲಿ ಅಪೂರ್ಣ ದಾಖಲೆಗಳನ್ನಾಗಲಿ ಅಥವಾ ಸೂಕ್ತ ಶಿಫಾರಸ್ಸು ಇಲ್ಲದೆ ಸಲ್ಲಿಸುವಂತಿಲ್ಲ ಹಾಗೂ ಅನಗತ್ಯವಾಗಿ ಪತ್ರ ವ್ಯವಹಾರಕ್ಕೆ ಎಡೆ ಮಾಡಿಕೊಡದಂತೆ ಎಚ್ಚರಿಕೆಯನ್ನು ವಹಿಸಿ ಪ್ರಸ್ತಾವನೆಯನ್ನು ನಿಯಮಗಳನ್ವಯ ಪರಿಶೀಲಿಸಿ ಸೂಕ್ತ ಶಿಫಾರಸ್ಸಿನೊಂದಿಗೆ ಕೆಳಕಂಡಂತೆ ನಿಗಧಿಪಡಿಸಿರುವಂತಹ ಕಾಲಮಿತಿಯೊಳಗೆ ಸಂಬಂಧಿಸಿದ ಆಯುಕ್ತಾಲಯಗಳ ಕಛೇರಿಗೆ ಸಲ್ಲಿಸತಕ್ಕದ್ದು. ಹಾಗೂ ನಿಗಧಿಪಡಿಸಿದ ಅವಧಿ ಮೀರಿದ ನಂತರ ಯಾವುದೇ ಪ್ರಸ್ತಾವನೆಗಳನ್ನು ಸಲ್ಲಿಸಬಾರದೆಂದು ಸಹಾ ಸೂಚಿಸಿದೆ.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

2 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

3 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

3 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

4 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

4 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

4 hours ago