ಶಿವಮೊಗ್ಗ.14.ಜೂನ್.25:- ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಸ ಅಫಿಲಿಯೇಟೆಡ್ ಸಲುವಾಗಿ ಅರ್ಜಿ ಆಹ್ವಾನ ಮಾಡಲಾಗಿದೆ.
ಆಸಕ್ತ ಸಂಸ್ಥೆಗಳು ಬಿಎಸ್ಸಿ (ಆನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್ ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್ ಫುಡ್ ಟೆಕ್ನಾಲಜಿ, ಬಿ.ಎಸ್ಸಿ(ಆನರ್ಸ್) ಅರಣ್ಯ, ಬಿ.ಎಸ್ಸಿ (ಆನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ (ಆನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ (ಆನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಆನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್‌ಗಾಗಿ ಕನಿಷ್ಟ ಮಾನದಂಡಗಳನ್ನು, ಹೆಚ್ಚಿನ ವಿವರ, ನಿಬಂಧನೆಗಳು ಮತ್ತು ಅರ್ಜಿಗಾಗಿ ಕೃಷಿ ವಿವಿಯ ವೆಬ್‌ಸೈಟ್ ಅನ್ನು ಸಂಪರ್ಕಿಸಬಹುದು. ಅಫಿಲಿಯೇಶನ್‌ಗಾಗಿ ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಈ ಸಾಲಿಗೆ ಪರಿಗಣಿಸಲಾಗುವುದಿಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವರ ಪ್ರಕಟಣೆ ತಿಳಿಸಿದೆ.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…