ಬೀದರ್.17.ಏಪ್ರಿಲ್.25:- ಖುರೇಶಿ ಸಮುದಾಯದ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕರ್ನಾಟಕ ಖುರೇಶ್ ಕಾನ್ಫರೆನ್ಸ್ ರಾಜ್ಯ ಅಧ್ಯಕ್ಷ ಅಬ್ದುಲ್ ನಬಿ ಖುರೇಶಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದ್ದಾರೆ.
ಖುರೇಶಿ ಸಮುದಾಯ ರಾಜ್ಯದಲ್ಲಿ ೧೬ ಲಕ್ಷ ಜನಸಂಖ್ಯೆ ಹೊಂದಿದ್ದು, ಪ್ರಾಣಿ ವ್ಯಾಪಾರ ಹಾಗೂ ಮಾಂಸ ವ್ಯಾಪಾರದ ಮೂಲಕ ಜೀವನ ನಿರ್ವಹಣೆ ಮಾಡುತ್ತಿದೆ. ಹಿಂದಿನ ಸರ್ಕಾರ ಕಸಾಯಿಖಾನೆಗಳನ್ನು ಮುಚ್ಚಿರುವುದರಿಂದ ಹಾಗೂ ಹೊಸ ಕಾನೂನು ಜಾರಿಗೊಳಿಸಿದ್ದರಿಂದ ವ್ಯವಹಾರ ಸಂಪೂರ್ಣ ನಿಂತು ಹೋಗುವ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಚ್ಚಲಾದ ಕಸಾಯಿಖಾನೆಗಳನ್ನು ಆಧುನಿಕರಿಸಿ, ಪುನರಾಂಭಿಸಬೇಕು. ರಾಜ್ಯ ಮಾಂಸ ಮಂಡಳಿ ರಚಿಸಿ, ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಬೇಕು. ಕರ್ನಾಟಕ ಗೋಮಾಂಸ ನಿಷೇಧ ಕಾನೂನು ೨೦೨೧ ಅನ್ನು ಹಿಂಪಡೆದು, ೧೯೬೪ ರ ಹಳೆ ಕಾನೂನು ಮರು ಜಾರಿಗೊಳಿಬೇಕು.
ಗೋಶಾಲೆ ಹಾಗೂ ಗೋ ರಕ್ಷಣೆಯ ಹೆಸರಲ್ಲಿ ದನದ ವ್ಯಾಪಾರಿಗಳ ವಾಹನಗಳನ್ನು ತಡೆದು, ಗುಂಪು ದರೋಡೆ ಮಾಡುವ ಸರ್ಕಾರೇತರ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಖುರೇಶಿ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು ಎಂದು ಹೇಳಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…