ಬೆಂಗಳೂರು.21.ಜೂನ್.25:- ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು ಈ ಸಂಬಂಧ ಪ್ರತೀ ಕೇಂದ್ರದಲ್ಲಿ ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಒಂದು ವರ್ಷದ ಅವಧಿಗೆ ತರಬೇತಿ ನೀಡಲಾಗುತ್ತದೆ.
ಖೇಲೋ-ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು ರಾಯಚೂರು ಜಿಲ್ಲೆಯ ಆಸಕ್ತ 12 ರಿಂದ 18 ವರ್ಷದ ಬಾಲಕ ಬಾಲಕೀಯರು ತಮ್ಮ ಜನ್ಮ ದಿನಾಂಕ ದೃಢೀಕರಣ ಪತ್ರ (ಶಾಲೆ ಅಥವಾ ಕಾಲೇಜು ಮುಖ್ಯಸ್ಥರಿಂದ ದೃಢೀಕೃತ) ಹಾಗೂ ಕ್ರೀಡಾ ಸಾಧನೆಯ ಪ್ರಶಸ್ತಿ ಪತ್ರದೊಂದಿಗೆ ದಿನಾಂಕ : 26-06-2025 ರಂದು ಬೆಳಿಗ್ಗೆ 10:00 ಗಂಟೆಗೆ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ನೋಂದಣೆ ಮಾಡಿಕೊಳ್ಳಬಹುದಾಗಿದೆ.
ಪ್ರಕ್ರಿಯೆಗೆ ಕ್ರೀಡಾ ಸಮವಸ್ತ್ರದೊಂದಿಗೆ ಭಾಗವಹಿಸಬೇಕಾಗಿದ್ದು ಅಥ್ಲೆಟಿಕ್ ಕ್ರೀಡೆಯ ಟ್ರ್ಯಾಕ್ ಮತ್ತು ಪೀಲ್ಡ್ ಇವೆಂಟ್ಸ್ಗಳಲ್ಲಿ ಆಯ್ಕೆ ಮಾಡಲಾಗುತ್ತದೆ.
ಇತ್ತೀಚಿನ 02 ಭಾವಚಿತ್ರದೊಂದಿಗೆ ಸ್ವ-ವಿವರದ ಅರ್ಜಿಯನ್ನು ಆಯ್ಕೆ ಸಂದರ್ಭದಲ್ಲಿ ಸಲ್ಲಿಸಬೇಕು.
ಆಯ್ಕೆ ಸಂದರ್ಭದಲ್ಲಿ ಯಾವುದೇ ಗಾಯಗಳು ಅನಾರೋಗ್ಯ ಯಾವುದೇ ಇತರೆ ಸಾವು ನೋವುಗಳು ಶಾಶ್ವತ ಅಂಗವೈಕಲ್ಯ ಮತ್ತು ಜೀವಹಾನಿ ಸಂಭವಿಸಿದರೆ ಸಂಸ್ಥೆ ಅಥವಾ ಇಲಾಖೆ ಜವಾಬ್ದಾರಿಯುತವಾಗಿರುವುದಿಲ್ಲ. ಹಾಗೂ ಆಯ್ಕೆಗೆ ಹಾಜರಾಗುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ದಿನಭತ್ಯೆ/ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಕಚೇರಿ ಅಥವಾ ಶ್ರೀ ಚಂದ್ರಶೇಖರ್ ಖೇಲೋ ಇಂಡಿಯಾ ತರಬೇತುದಾರರು ಮೋ ಸಂ : 9886551214 ಅನ್ನು ಸಂಪರ್ಕಿಸಬಹುದಾಗಿದೆ.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…