ಕೊಪ್ಪಳ.01.ಆಗಸ್ಟ್.25: ಗಂಗಾವತಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗಾಗಿ 2025-26ನೇ ಸಾಲಿನಲ್ಲಿ ಅವಶ್ಯಕತೆ ಇರುವ ಅತಿಥಿಬೋಧಕರ ಹುದ್ದೆಗೆ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಖಾಲಿ ಹುದ್ದೆಗಳು, ಅರ್ಹತೆ ವಿವರ: ಖಾಲಿ ಇರುವ ಏಳು ಎಲೆಕ್ಟ್ರೀಷಿಯನ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ ಎಲೆಕ್ಟ್ರೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಒಂದು ಫಿಟ್ಟರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಒಂದು ಮೆಕಾನಿಕ್ ಮೋಟರ್ ವೆಹಿಕಲ್ ಹುದ್ದೆಗೆ ಐಟಿಐ, ಎಟಿಎಸ್, ಡಿಪ್ಲೋಮಾ ಇನ್ ಅಟೋಮೊಬೈಲ್ಸ್ ಅಥವಾ ಡಿಎಂಇ ವಿದ್ಯಾರ್ಹತೆ ಹೊಂದಿರಬೇಕು. ಒಂದು ಟರ್ನರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಎರಡು ವೇಲ್ಡರ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಈ ಎಲ್ಲಾ ಹುದ್ದೆಗೆಳಿಗೆ ನಿಗದಿತ ವಿದ್ಯಾರ್ಹತೆಹೊಂದಿಗೆ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಆಸಕ್ತ ಅರ್ಹ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆಮೂಲಕ ಆಗಸ್ಟ್ 11ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಗಂಗಾವತಿ ಮೊ.ಸಂ: 9448259832 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…
ಹೊಸ ದೆಹಲಿ.02.ಆಗಸ್ಟ್.25:- ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇಂದು ನವದೆಹಲಿಯಲ್ಲಿ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅವರನ್ನು ಸನ್ಮಾನಿಸಿದರು.…
ಪುಣೆ.02.ಆಗಸ್ಟ್.25:- ಪುಣೆಯಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ 43ನೇ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು…
ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು…