ಬೀದರ.20.ಜನವರಿ.25: ಇಂದು ಬೀದರ ಜಿಲ್ಲಾ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗಣರಾಜ್ಯೋತ್ಸವ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸೋಣ, ಅಂದು ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಯಶಸ್ವಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ.26 ರ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜನವರಿ.26 ರಂದು ಗಣರಾಜ್ಯೋತ್ಸವ ನಿಮಿತ್ಯ ಜನವರಿ.25 ಮತ್ತು 26 ರಂದು 2 ದಿವಸ ಸಂಘ-ಸoಸ್ಥೆಗಳು, ಸರ್ಕಾರಿ ಕಚೇರಿಗಳು ಎಲ್ಲಾ ಮಹನಿಯರ ವೃತ್ತದ ಮೇಲೆ ದೀಪಲಾಂಕಾರ ಮಾಡುವುದು.
ಜನವರಿ.26 ರಂದು ಬೆಳಿಗ್ಗೆ 8 ಗಂಟೆಗೆ ಸರ್ಕಾರಿ-ಅರೆ ಸರ್ಕಾರಿ, ವಿವಿಧ ಶಾಲಾ ಕಾಲೇಜು ಮತ್ತು ಸಂಘ-ಸoಸ್ಥೆಗಳ ಮೇಲೆ ಧ್ವಜಾರೋಹಣ ನೆರವೇರಿಸಿ ನಂತರ ಎಲ್ಲಾ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳೊಂದಿಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಬೆಳಿಗ್ಗೆ 8:45 ಗಂಟೆಯೊಳಗೆ ಹಾಜರಾಗಬೇಕು.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಮುಂಚಿತವಾಗಿ ಪ್ರಬಂಧ ಸ್ಪರ್ಧೆ, ರಂಗೋಲಿ ಸ್ಪರ್ಧೆ ಏರ್ಪಡಿಸುವಂತೆ ಸೂಚಿಸಿದರು.
ಬೆಳಿಗ್ಗೆ 9 ಗಂಟೆಗೆ ಬೀದರ ನಗರದ ನೇಹರು ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಗುವುದು.
ನೆಹರು ಕ್ರೀಡಾಂಗಣದಲ್ಲಿ ಜರುಗುವ ಪಥ ಸಂಚಲನ ಶಾಲಾ ಮಕ್ಕಳಿಂದ ಕವಾಯತ ಮತ್ತು ಇತ್ಯಾದಿ ಕಾರ್ಯಕ್ರಮಗಳನ್ನು ನಿಯಮಾನುಸಾರ ಅಚ್ಚು ಕಟ್ಟಾಗಿ ನೇರವೇರಿಸಲು ರಚಿಸಿದ ಉಪ ಸಮಿತಿಯ ಎಲ್ಲಾ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಶಿಕ್ಷಣ ಇಲಾಖೆ ವತಿಯಿಂದ ಮೂರು ಸರ್ಕಾರಿ, ಎರಡು ಖಾಸಗಿ ಶಾಲಾ ಕಾಲೇಜುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ವ್ಯವಸ್ಥೆ ಮಾಡಬೇಕು. ಗಣರಾಜ್ಯೋತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದೇವರ ರಂಗಮAದಿರದಲ್ಲಿ ಸಂಜೆ 5.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾAತ ಪೂಜಾರ, ಸಹಾಯಕ ಆಯುಕ್ತರಾದ ಎಂ.ಡಿ.ಶಕೀಲ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುತ್ತಣ್ಣ ಕರಿಗಾರ, ಸಂಘ-ಸoಸ್ಥೆ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…