ಗಿಡಗಳನ್ನು ಬೆಳೆಸುವುದರ ಮೂಲಕ ನಾವೇಲ್ಲರೂ ಪರಿಸರಕ್ಕೆ ಕೊಡುಗೆ ನೀಡಬೇಕು-ನ್ಯಾ.ಪ್ರಕಾಶ ಬನಸೋಡೆ

ವಿಶ್ವ ಜಲ ದಿನ ಹಾಗೂ NALSA Legal Services to Victims of Acid
Attack Scheme 2016 ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ.


ಬೀದರ.29.ಮಾರ್ಚ.25:-ನೀರು ಉಳಿಸಲು ನಾವೆಲ್ಲರೂ ಕೈಜೋಡಿಸಬೇಕು, ಜೊತೆಗೆ ಪರಿಸರ ಹಾನಿಯನ್ನು ಆದಷ್ಟು ತಡೆಯಬೇಕು, ಗಿಡಗಳನ್ನು ಬೆಳೆಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ಹೇಳಿದರು.


ಅವರು ಇಂದು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಪಂಚಾಯತ ಬೀದರ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಬೀದರನ ಬೇನಕನಳ್ಳಿಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಲ ದಿನ ಹಾಗೂ NALSA Legal Services to Victims of Acid Attack Scheme 2016  ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಅಂತರ್ಜಲ ಹೆಚ್ಚಿಸುವ ಕ್ರಮಗಳಾದ ಇಂಗುಗುಂಡಿ, ಮಳೆನೀರಿನ ಕೊಯ್ಲು ಮುಂತಾದ ಅಗತ್ಯ ಕ್ರಮಗಳನ್ನು ಮನೆಗಳಿಂದಲೇ ಆರಂಭಿಸಬೇಕೆಂದರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸವಲತ್ತುಗಳ ಬಗ್ಗೆ ಹಾಗೂ Victims of Acid Attack Scheme 2016  ಬಗ್ಗೆ ಮಾತನಾಡಿದರು.


ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ನಾಗೇಂದ್ರ ಬಿರಾದರ ಅವರು ಮಾತನಾಡಿ, ಸಮಾಜದಲ್ಲಿ ಜನರು ನೀರಿನ ಬಳಕೆ ಮತ್ತು ಮಹತ್ವ ಕುರಿತು ಮಾತನಾಡಿದರು.


ಈ ಕಾರ್ಯಕ್ರಮದಲ್ಲಿ ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ, ಬೀದರ ವಕೀಲರಾದ ಕೃಷ್ಣಪ್ಪಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸಂಜೀವಕುಮಾರ ಶಳಕೆ, ಉಮೇಶ ಜಾಬಾ,, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಯಾದ ಆಕಾಶ ಸಜ್ಜನಶೆಟ್ಟಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ವರ್ಗದವರು, ಬೇನಕನಳ್ಳಿ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

31 minutes ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

2 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

2 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

2 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

8 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

14 hours ago