ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್ ಅವರ ಗುರುದ್ವಾರಕ್ಕೆ ಭೇಟಿ ನೀಡಿ, ಸಿಖ್ ಸಂಪ್ರದಾಯದoತೆ ಪೂಜಾ ವಿಧಾನಗಳಲ್ಲಿ ಭಾಗವಹಿಸಿ,ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ ಗುರುದ್ವಾರದ ಸಾಮಾಜಿಕ ಸೇವೆಗಳ ಮಾಹಿತಿ ಪಡೆದ ಸಚಿವರು ಅನ್ನಪ್ರಸಾದ ಸ್ವೀಕರಿಸಿದರು. ಗುರುದ್ವಾರದ ಮುಖ್ಯಸ್ಥರು ಸಚಿವರಿಗೆ ಪುಸ್ತಕ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಂತ್ವಿತ್ ಸಿಂಗ್ ಲವನಿತ್, ಉದ್ಯಮಿಗಳಾದ ದೀಪಕ್ ವಾಲಿ, ವಿವೇಕ್ ವಾಲಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಂ.ಎಸ್. ಶ್ರೀಧರ ಸೇರಿದಂತೆ ಇತರರು ಉಪಸ್ಥಿತರಿದ್ದರು.