ಗುಲಬರ್ಗಾ ವಿಶ್ವವಿದ್ಯಲಯ: ಲೋಕಾಯುಕ್ತ ದಾಳಿ ಬೆನ್ನಲ್ಲೇ, ಕುಲಸಚಿವೆ ಪ್ರೊ. ಮೇಧಾವಿನಿ ವರ್ಗಾವಣೆ

ಕಲಬುರಗಿ.03.ಮಾರ್ಚ.25:- ಗುಲ್ಬರ್ಗಾ ವಿಶ್ವಿದ್ಯಾಲಯದ, ಕಾಲಬುರಾಗಿ. ಮೌಲ್ಯಮಾಪನ ವಿಭಾಗದ ಕುಲಸಚಿವೆ  ಕರ್ತವ್ಯಲೋಪ ಸೇರಿದಂತೆ ವಿವಿಧ ಆರೋಪಗಳ ಮತ್ತು ಅಂಕಪಟ್ಟಿ ವಿತರಣೆಯಲ್ಲಿ ವಿಳಂಬ  ಹಿನ್ನೆಲೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಮೇಲೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಮೌಲ್ಯಮಾಪನ ಕುಲಸಚಿವೆ ಪ್ರೊ.ಮೇಧಾವಿನಿ ಕಟ್ಟಿ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಇಂದು ಆದೇಶ ಹೊರಡಿಸಿದೆ.

ಫಲಿತಾಂಶ ಪ್ರಕಟವಾಗಿ ಹಲವು ತಿಂಗಳಾದರೂ ಸಕಾಲಕ್ಕೆ ಅಂಕಪಟ್ಟಿಗಳು ಸಿಗುತ್ತಿಲ್ಲ. ಅಂಕಪಟ್ಟಿ ಕೊಡಲು ಸಿಬ್ಬಂದಿ ಹಣಕ್ಕಾಗಿ ಬೇಡಿಕೆ ಇಡುತ್ತಾರೆ’ ಎಂದು ಹಲವು ವಿದ್ಯಾರ್ಥಿಗಳು ಲೋಕಾಯುಕ್ತ ಸಂಸ್ಥೆಗೆ ದೂರು ಸಲ್ಲಿಸಿದ್ದರು.

ಈ ದೂರಿನ ಹಿನ್ನೆಲೆಯಲ್ಲಿ ಇತ್ತೀಚೆಗೆ ದಾಳಿ ನಡೆಸಿದ್ದ ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್ ನೇತೃತ್ವದ ಅಧಿಕಾರಿಗಳ ತಂಡವು ಎರಡು ದಿನಗಳ ಕಾಲ ಹಲವು ದಾಖಲೆಗಳನ್ನು ಜಾಲಾಡಿತ್ತು. ಪ್ರೊ. ಮೇಧಾವಿನಿ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು.

ವಿದ್ಯಾರ್ಥಿಗಳು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಅಂಕಪಟ್ಟಿ, ಘಟಿಕೋತ್ಸವ ಪ್ರಮಾಣಪತ್ರಗಳು ಸಕಾಲಕ್ಕೆ ಸಿಗದೇ ಇರುವ ಬಗ್ಗೆ ಹಾಗೂ ಸಿಬ್ಬಂದಿಯ ವರ್ತನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಲೋಕಾಯುಕ್ತ ಎಸ್ಪಿ ಅವರು ಮಧ್ಯಪ್ರವೇಶಿಸಿ ಕೆಲವು ವಿದ್ಯಾರ್ಥಿಗಳ ಪ್ರಮಾಣಪತ್ರಗಳನ್ನು ಸ್ಥಳದಲ್ಲೇ ಕೊಡಿಸಿದ್ದರು.

ಪರೀಕ್ಷಾ ವಿಭಾಗದಲ್ಲಿ ಅಂಕಪಟ್ಟಿ ವಿಳಂಬವಾಗಿ ರವಾನೆಯಾಗಿರುವ ಕುರಿತು ಲೋಕಾಯುಕ್ತ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಇದನ್ನು ಆಧರಿಸಿ ಪ್ರೊ.ಮೇಧಾವಿನಿ ಅವರನ್ನು ಮೌಲ್ಯಮಾಪನ ಕುಲಸಚಿವರ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಗೊತ್ತಾಗಿದೆ. ಅವರಿಗೆ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

prajaprabhat

Recent Posts

ಯುಜಿಸಿ ಕರಡು ನಿಯಮ ಪುನರ್‌ಪರಿಶೀಲನೆಗೆ ಆಗ್ರಹ

ಶಿಕ್ಷಣ ವ್ಯವಸ್ಥೆಯ ಬದಲಾವಣೆಯು ಗುಣಮಟ್ಟವನ್ನು ದುರ್ಬಲಗೊಳಿಸಬಾರದು. ಆದ್ದರಿಂದ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತನ್ನ ಕರಡು ನಿಯಮಾವಳಿಗಳನ್ನು ಪುನರ್‌ ಪರಿಶೀಲಿಸಬೇಕು'…

7 hours ago

ಅಭಿ ಪಿಕ್ಚರ್ ಬಾಕಿ ಹೈ; ರಾಹುಲ್ ಗಾಂಧಿ ಹೇಳಿಕೆ ಕುತೂಹಲಕೆ ಕಾರಣ.

ಅಭಿ ಪಿಕ್ಚರ್ ಬಾಕಿ ಹೈ; ಅಣು ಬಾಂಬ್ ಬೆನ್ನಲ್ಲೇ ಕುತೂಹಲ ಮೂಡಿಸಿದ ರಾಹುಲ್ ಹೇಳಿಕೆ ಚುನಾವಣಾ ಆಯೋಗವು 'ಒಬ್ಬ ವ್ಯಕ್ತಿ,…

7 hours ago

ನವದೆಹಲಿ: ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ NHRC ಎರಡು ವಾರಗಳ ಆನ್‌ಲೈನ್ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಇಂದು ನವದೆಹಲಿಯಲ್ಲಿ ತನ್ನ ಎರಡು ವಾರಗಳ ಆನ್‌ಲೈನ್ ಅಲ್ಪಾವಧಿಯ ಇಂಟರ್ನ್‌ಶಿಪ್…

8 hours ago

ಕರಾವಳಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಬಂದರು ಮಸೂದೆ, 2025 ಅನ್ನು ಲೋಕಸಭೆ ಅಂಗೀಕರಿಸಿದೆ.

ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…

8 hours ago

ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ನಾಲ್ಕು ಹೊಸ ಸೆಮಿಕಂಡಕ್ಟರ್ ಯೋಜನೆಗಳಿಗೆ ₹4,594 ಕೋಟಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…

8 hours ago

ಕಚ್ಚಾ ತೈಲ ಬೆಲೆ ಇಳಿಕೆ; ಬ್ರೆಂಟ್ ಮತ್ತು $66.31, WTI ಪ್ರತಿ ಬ್ಯಾರೆಲ್‌ಗೆ $63.53

ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 66…

8 hours ago