ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ.!

ಕಲಬುರ್ಗಿ, 19.ಜನವರಿ.25.ಗುಲ್ಬರ್ಗಾ ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲಿ ಭಾರತ ಸರ್ಕಾರದ ಕೇಂದ್ರ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆಯನ್ನು ಗುಲ್ಬರ್ಗಾ ವಿಶ್ವವಿದ್ಯಾಲಯದ ಎಸ್‌ಸಿ /ಎಸ್‌ಟಿ ನೌಕರರ ಸಂಘದ ಪದಾಧಿಕಾರಿಗಳು ತೀವ್ರವಾಗಿ ಖಂಡಿಸಿ ಗುರುವಾರ ವಿಶ್ವವಿದ್ಯಾಲಯದ ಕಾರ್ಯಸೌಧದ ಮುಂದೆ ಪ್ರತಿಭಟನೆ ನಡೆಸಿದರು.

ಕೇಂದ್ರ ಗೃಹ ಸಚಿವರ ಹೇಳಿಕೆ ವಿರುದ್ಧ ಘೋಷಣೆ ಕೂಗುವ ಮೂಲಕ ಗೃಹ ಸಚಿವರು ದೇಶದ ಜನರ ಮುಂದೆ ಕ್ಷಮೆಯಾಚಿಸಿ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು.

ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಚಂದ್ರಕಾಂತ್ ಯಾತನೂರು ಅವರು ಮಾತನಾಡಿ, ಕೇಂದ್ರ ಗೃಹ ಸಚಿವರು ತಮ್ಮ ಅಸಂವಿಧಾನಿಕ ಹೇಳಿಕೆಯನ್ನು ಹಿಂಪಡೆದು ದೇಶದ ಜನರ ಮುಂದೆ ಬೇಶರತ್ತಾಗಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ದೇಶದ ಪ್ರಜ್ಞಾವಂತರಾದ ನಮಗೆ ತುಂಬಲಾರದ ನೋವಾಗಿದೆ. ಭವ್ಯ ಭಾರತದ ನೊಂದಿರುವ ವಿವಿಧ ಸಮುದಾಯಗಳನ್ನು ಅವಮಾನಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನವನ್ನು ಸ್ಮರಿಸಿ ಅಧಿಕಾರ ಅನುಭವಿಸುತ್ತಿರುವ ಪ್ರಜ್ಞಾವಂತ ಸಚಿವರೊಬ್ಬರು ಈ ರೀತಿಯ ಹೇಳಿಕೆ ನೀಡಿರುವುದು ದುರಾದೃಷ್ಟಕರ ಎಂದು ಖಂಡಿಸಿದರು.

ವಿಶ್ವವಿದ್ಯಾಲಯದ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ ಸಂಘಗಳ ಜೊತೆಗೆ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಗ್ರಂಥಾಲಯದಿಂದ ವಿಶ್ವವಿದ್ಯಾಲಯದ ಕಾರ್ಯಸೌಧದವರೆಗೆ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಅದ್ಯಯನ ಸಂಸ್ಥೆ ನಿರ್ದೇಶಕ ಹಾಗೂ ಸಾಹಿತಿ ಪ್ರೊ.ಎಚ್.ಟಿ.ಪೋತೆ, ಸಂಘದ ಅಧ್ಯಕ್ಷ ಪ್ರೊ. ಜಿ.ಎಂ.ವಿದ್ಯಾಸಾಗರ್, ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಶ್ರೀರಾಮುಲು, ಪ್ರೊ.ದಶರಥ್ ನಾಯಕ, ಪ್ರೊ.ಎಸ್.ಎನ್.ಗಾಯಕವಾಡ್, ಪ್ರೊ.ಆನಂದ್ ನಾಯಕ್, ಪ್ರೊ.ಆನಂದ್ ಸಾವದಾನೆ, ಎಸ್ಸಿ/ಎಸ್ಟಿ ನೌಕರರ ಸಂಘದ ಕಾರ್ಯದರ್ಶಿ ಬಸವರಾಜ್ ಕಪೂರ್, ಬೋಧಕೇತರ ಸಿಬ್ಬಂದಿ ಪ್ರಕಾಶ್ ಹದನೂರು, ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಘಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಶ್ವವಿದ್ಯಾಲಯದ ಸ್ನಾತಕೋತ್ತರ ಅತಿಥಿ ಉಪನ್ಯಾಸಕರ ಸಂಘ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ ಸಂಘಗಳ ಜೊತೆಗೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago