ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ 52,32,35,500 ರೂ.ಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ಇವರ ಮೂಲಕ ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾವಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರಾದ ಪಾಮಯ್ಯ ಮುರಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
