ಬೆಳಗಾವಿ.03.ಜೂನ್.25:- ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಸತೀಶ್ ಜಾರಕಿಹೊಳಿ ಅವರು ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೀಡಿದ ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ.
ಈ ಕುರಿತು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಸಚಿವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನನಗೆ ಗೌರವ ಡಾಕ್ಟರೇಟ್ ಡಿ.ಲಿಟ್.
ಗೌರವ ಪದವಿಯನ್ನು ನೀಡುವುದರ ಮೂಲಕ ತಮಗೆ ಹಾಗೂ ವ್ಯವಸ್ಥಾಪನ ಮಂಡಳಿಗೆ ನಾನು ಹೃತ್ತೂರ್ವಕವಾಗಿ ಆಭಾರಿಯಾಗಿದ್ದೇನೆ.
ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿರುತ್ತೇನೆ. ಆದರೆ ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದಂತಹ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇರುತ್ತದೆ. ಈ ಹಿನ್ನಲೆಯಲ್ಲಿ, ತಮ್ಮ ವಿಶ್ವವಿದ್ಯಾನಿಲಯದ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಪತ್ರದಲ್ಲಿ ತಿಳಿಸಿದ್ದಾರೆ.
ನನ್ನ ಈ ನಿರ್ಧಾರವನ್ನು ಅನ್ಯಥಾ ಭಾವಿಸದೇ, ನಾನು ಮನಸೋಯಿಚ್ಛೆ ಕೈಗೊಂಡಿರುವ ನಿರ್ಧಾರವಾಗಿದೆ ಎಂದು ಮೈಸೂರು ಮಾನಸ ಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…