ಬೆಂಗಳೂರು.03.ಜುಲೈ.25:- ರಾಜ್ಯ ಸರ್ಕಾರ ವತಿಯಿಂದ ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಬಸ್ ಪಾಸ್ ಅನ್ನು ಈಗ ಅರೆಕಾಲಿಕ, ಸಂಪಾದಕರಿಗೂ ಮುಖ್ಯಸ್ಥರ ಶಿಫಾರಸ್ಸು ಪತ್ರ ನೀಡಿದ್ರೆ ವಿತರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಈ ಕುರಿತಂತೆ ತಿದ್ದುಪಡಿ ಆದೇಶವನ್ನು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ.
ಅದರಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರ, ಸಂಪಾದಕರ, ಮುಖ್ಯಸ್ಥರ ಶಿಫಾರಸ್ಸು ಪತ್ರ, ಸಂಸ್ಥೆಯಿಂದ ಪಡೆಯುತ್ತಿರುವ ಲೈನೇಜ್, ಸಂಭಾವನೆ ಪಡೆಯುತ್ತಿರುವ ಬಗ್ಗೆ ಕಳೆದ 11 ತಿಂಗಳ ಅವಧಿಯ ಬ್ಯಾಂಕ್ ಖಾತೆಯ ವಿವರಗಳು, ಸಂಬಂಧಿತ ದಾಖಲೆಗಳನ್ನು ಒದಗಿಸಲು ಅವಕಾಶ ನೀಡಿದೆ.
ಅಂದಹಾಗೆ ಈ ಮೊದಲು ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಪೂರ್ಣಾವಧಿಯ ಪತ್ರಕರ್ತರು ಆಗಿರಬೇಕು ಎಂಬುದಾಗಿ ಷರತ್ತು ವಿಧಿಸಲಾಗಿತ್ತು. ಈ ನಿಯಮದ ಕಾರಣ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೈತಪ್ಪುವ ಆತಂಕ ಎದುರಾಗಿತ್ತು. ಏಕೆಂದರೆ ಬಹುತೇಕ ಗ್ರಾಮೀಣ ಪತ್ರಕರ್ತರು ಪ್ರೀ ಲಾಸ್ಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪೂರ್ಣಕಾಲಿಕ ವರದಿಗಾರರು ತಾಲೂಕಿನ ಮಟ್ಟದಲ್ಲಿ ಕಡಿಮೆ.
ಈಗ KUWJ ಅಧ್ಯಕ್ಷ ಶಿವಾನಂದ ತಗಡೂರ ಅವರ ಪರಿಶ್ರಮದಿಂದ ನಿಯಮ ಬದಲಾವಣೆ ಆಗಿದೆ ಹೀಗಾಗಿ ಬಹುತೇಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ದೊರೆಯುವಂತೆ ಆಗಲಿ.
ಔರಾದ.04.ಜುಲೈ.25:- ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿ ಶಾಲಾವಧಿಯಲ್ಲಿ ಅಕ್ರಮವಾಗಿ ವಿದ್ಯಾರ್ಥಿಗಳ ಪೋಷಕರಿಂದ ಹಣ ಪೀಕುತ್ತಿರುವ 'ಕೋಚಿಂಗ್' ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ…
ಬೆಂಗಳೂರು.04.ಜುಲೈ.25:- ಪ್ರೌಢಶಾಲಾ ಸಹ ಶಿಕ್ಷಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ…
DWCD Yadgiri Recruitment 2025 : ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಹುದ್ದೆಗಳ…
ಬೆಂಗಳೂರು.04.ಜುಲೈ.25:-<ಉದ್ಯಮ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದ ಹೊರತು ಕನಿಷ್ಠ ವೇತನ ಪರಿಷ್ಕರಣೆ ಮಾಡಿ ಹೊರಡಿಸಲಾಗಿರುವ ಉದ್ದೇಶಿತ ಕರಡು ಅಧಿಸೂಚನೆ ಅನ್ವಯ ಭವಿಷ್ಯದಲ್ಲಿ…
ದೇಶದಲ್ಲಿ ಹಲವಾರು ಪಾಕಿಸ್ತಾನಿ ನಟರು ಮತ್ತು ಕ್ರಿಕೆಟಿಗರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಸರ್ಕಾರ ಮತ್ತೆ ನಿಷೇಧಿಸಿದೆ. ತಾಂತ್ರಿಕ ಕಾರಣಗಳಿಂದಾಗಿ ಈ…
ಮೊದಲ ಖೇಲೋ ಇಂಡಿಯಾ ಜಲ ಕ್ರೀಡಾ ಉತ್ಸವವು ಆಗಸ್ಟ್ 21 ರಿಂದ ಶ್ರೀನಗರದ ಐತಿಹಾಸಿಕ ದಾಲ್ ಸರೋವರದಲ್ಲಿ ನಡೆಯಲಿದೆ. ಇದನ್ನು…