ಗ್ರಾಮೀಣ ಪಾತ್ರಕೃತರಿಗೆ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ಬೆಂಗಳೂರು: 29.ಜನವರಿ.25:- ರಾಜ್ಯ ಸರ್ಕಾರ ವತಿಯಿಂದ ಗ್ರಾಮೀಣ ಪತ್ರಕರ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಮುಖೇಮಂತ್ರಿ ಸಿದ್ಧರಾಮಯ್ಯ ಅವರು ಜಾರಿಗೆ ತಂದಿದ್ದಾರೆ.

ರಾಜ್ಯದ ಮಾದ್ಯಮ ಮಿತ್ರರಿಗೆ ಜಿಲ್ಲಾ ಸಾರಿಗೆ ಬಸ್ ಪಾಸ್ ಯೋಜನೇ ಜಾರಿಗೆ ತಂದಿದ್ದಾರೆ ರಾಜ್ಯದಲ್ಲಿ ಕಾರ್ಯನಿರ್ವಾಹಕ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ ‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

54 minutes ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

10 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

15 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

15 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

20 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago