ಕರ್ಣಾಟಕ ಸರ್ಕಾರ ಇಂದು ಗ್ರಾಮೀಣ ಭಾಗದ ಪತ್ರಕರ್ತರಿಗೆ ಅನುಕೂಲವಾಗಲೆಂದು ಬಸ್ ಪಾಸ್ ಜಾರಿ ಸಂಬಂಧ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನೆಲೆಯಲ್ಲಿ, ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.
ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು. ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಯೋಜನೆ ತಲುಪಿಸಲು ಇಲಾಖೆ ಕ್ರಮ ಕೈಗೊಂಡಿದೆ. ಇದಕ್ಕಾಗಿ ಸಾಫ್ಟ್ವೇರ್ ಅಭಿವೃದ್ಧಿ ಪಡಿಸಲಾಗಿದ್ದು, ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.
ಪತ್ರಕರ್ತರು ವಾರ್ತಾ ಇಲಾಖೆಗೆ ಅರ್ಜಿ ಸಲ್ಲಿಸಬೇಕಿಲ್ಲ. ಆಯಾ ಜಿಲ್ಲಾಮಟ್ಟದಲ್ಲಿ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದ್ದು, ನಿಯಮಗಳನ್ನು ಸರಳೀಕರಣ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗ್ರಾಮೀಣ ಭಾಗದ ಪತ್ರಕರ್ತರಿಗೆ ಅನುಕೂಲ ವಾಗುವಂತೆ ಈ ಯೋಜನೆಯ ಜಾರಿ ಮಾಡಲಾಗಿದೆ!
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…