ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 5,980 ಸಿಬ್ಬಂದಿಗೆ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ ವಿದ್ಯಾರ್ಹತೆ ಇಲ್ಲದ ಸಿಬ್ಬಂದಿಗೆ ‘ಸೇವಾ ಭದ್ರತೆ’ ನೀಡಲು ರಾಜ್ಯ ಸರ್ಕಾರ 2023ರಲ್ಲೇ ಆದೇಶ ಹೊರಡಿಸಿದ್ದರೂ ಅದರೆ ಅವರಿಗೆ ಇದುವರೆಗೆ ಅನುಮೋದನೆ ಸಿಕ್ಕಿಲ್ಲ.
2017ಕ್ಕೂ ಮುಂಚೆ ಗ್ರಾಮ ಪಂಚಾಯಿತಿಯಿಂದ ನೇಮಕಗೊಂಡ ನೀರುಗಂಟಿ (ವಾಟರ್ ಆಪರೇಟರ್), ಜವಾನ (ಅಟೆಂಡರ್) ಮತ್ತು ಸ್ವಚ್ಛತಾಗಾರರ ಹುದ್ದೆಗಳಿಗೆ ‘ಕನಿಷ್ಠ ವಿದ್ಯಾರ್ಹತೆ’ಯ ತೊಡಕು ನಿವಾರಿಸಿ ಸಭಾ ನಡಾವಳಿ, ವೇತನ ಪಾವತಿ, ಹಾಜರಾತಿ ಆಧಾರದ ಮೇಲೆ ಜಿಲ್ಲಾ ಪಂಚಾಯಿತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ನಿರ್ದೇಶಕರು 2023ರಲ್ಲೇ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಆದೇಶಿಸಿದ್ದರು.
2017ರ ಅಕ್ಟೋಬರ್ 31ಕ್ಕೂ ಮುಂಚೆ ನೇಮಕಗೊಂಡ ಕರ ವಸೂಲಿಗಾರರು-940, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್- 1,231, ನೀರುಗಂಟಿ- 12,348, ಸ್ವಚ್ಛತಾಗಾರರು- 2,847, ಜವಾನ- 1306 ಸೇರಿದಂತೆ ಒಟ್ಟು 18,672 ಸಿಬ್ಬಂದಿಗೆ ನಾನಾ ಕಾರಣಗಳಿಂದ ಜಿಲ್ಲಾ ಪಂಚಾಯಿತಿ ಅನುಮೋದನೆ ಸಿಕ್ಕಿರಲಿಲ್ಲ. ಅವರಲ್ಲಿ 11,681 ಸಿಬ್ಬಂದಿ ಕನಿಷ್ಠ ವಿದ್ಯಾರ್ಹತೆ ಹೊಂದದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಉಳಿದಿದ್ದರು.
‘5,711 ಸಿಬ್ಬಂದಿಗೆ ಅನುಮೋದನೆ ನೀಡಲಾಗಿದ್ದು, ಉಳಿದವರಿಗೆ ‘ಸೇವಾ ಭದ್ರತೆ’ ಕಲ್ಪಿಸಬೇಕಿದೆ. ಕೆಲವೆಡೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಮತ್ತೆ ಕೆಲವೆಡೆ ಬಾಕಿ ಪ್ರಕರಣಗಳ ವಿಲೇವಾರಿಗೆ ತಂಡ ರಚಿಸಿದ್ದೇವೆ. ಶೀಘ್ರದಲ್ಲೇ ಅನುಮೋದನೆ ನೀಡಲಾಗುತ್ತದೆ’ ಎನ್ನುತ್ತಾರೆ ಪಂಚಾಯತ್ ರಾಜ್ ಆಯುಕ್ತಾಲಯದ ಅಧಿಕಾರಿಗಳು.
ಹಲವು ಸೌಲಭ್ಯ:
ಜಿಲ್ಲಾ ಪಂಚಾಯಿತಿ ಅನುಮೋದನೆ ನೀಡಿದರೆ, ಕನಿಷ್ಠ ವೇತನ, ಸೇವಾ ಭದ್ರತೆ, ಅನುಕಂಪದ ಆಧಾರದಲ್ಲಿ ಕುಟುಂಬದ ಸದಸ್ಯರ ನೇಮಕ, ಪಿಂಚಣಿ ಸೌಲಭ್ಯ, ಸಕಾಲದಲ್ಲಿ ವೇತನ, ರಜೆ ಸೌಲಭ್ಯ, ವೈದ್ಯಕೀಯ ಸೌಲಭ್ಯ ಹಾಗೂ ವಿದ್ಯಾರ್ಹತೆ ಗಳಿಸಿದರೆ ಬಡ್ತಿ ಸೇರಿ ಹಲವು ಸೌಲಭ್ಯಗಳು ಸಿಬ್ಬಂದಿಗೆ ಸಿಗಲಿವೆ.
‘ವೇತನ ಪಾವತಿ, ಪಂಚಾಯಿತಿ ನಿರ್ಣಯ ಮತ್ತು ಹಾಜರಾತಿ ದಾಖಲೆಗಳು ಪಿಡಿಒ ಬಳಿಯೇ ಇರುತ್ತವೆ. ಆದರೂ ದಾಖಲೆ ತಂದುಕೊಡುವಂತೆ ಸಿಬ್ಬಂದಿಯನ್ನು ಅಲೆದಾಡಿಸುತ್ತಿದ್ದಾರೆ. ಭ್ರಷ್ಟಾಚಾರದಿಂದಲೇ ಅನುಮೋದನೆ ಕಾರ್ಯ ವಿಳಂಬವಾಗಿದೆ’ ಎಂದು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ ದೂರಿದ್ದಾರೆ.
– ಕೆ.ಆರ್. ನಂದಿನಿ ಸಿಇಒ ಮಂಡ್ಯ ಜಿಲ್ಲಾ ಪಂಚಾಯಿತಿಮಂಡ್ಯ ಜಿಲ್ಲೆಯಲ್ಲಿ 601 ಸಿಬ್ಬಂದಿಗೆ ಅನುಮೋದನೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದ್ದು ತಿಂಗಳೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ
‘₹10 ಸಾವಿರ ಲಂಚ ಕೊಡಿ’ ‘
ಹಲವು ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಸಿಬ್ಬಂದಿಗೆ ಸೇವಾ ಭದ್ರತೆ ನೀಡಲು ಕ್ರಮ ಕೈಗೊಂಡಿದೆ. ಆದರೆ ಅಧಿಕಾರಿಗಳ ಹಣದ ದಾಹದಿಂದ ಅನುಮೋದನೆ ನೀಡುವ ಕಾರ್ಯ ನನೆಗುದಿಗೆ ಬಿದ್ದಿದೆ. ಒಬ್ಬ ಸಿಬ್ಬಂದಿಗೆ ಅನುಮೋದನೆ ನೀಡಲು ಕೊಪ್ಪಳ ಗದಗ ಶಿವಮೊಗ್ಗ ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ₹10 ಸಾವಿರ ಲಂಚ ಕೇಳುತ್ತಿದ್ದಾರೆ. ಚಿತ್ರದುರ್ಗದಲ್ಲಿ ಕೆಲವು ಸಿಬ್ಬಂದಿಗೆ ಅನುಮೋದನೆ ಸಿಕ್ಕಿದ್ದರೂ ಹಣ ಕೊಟ್ಟ ನಂತರವಷ್ಟೇ ಆದೇಶ ಪ್ರತಿ ನೀಡುವುದಾಗಿ ಕಾಡಿಸುತ್ತಿದ್ದಾರೆ’ ಎಂದು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಎಂ.ಬಿ. ನಾಡಗೌಡ ಆರೋಪಿಸಿದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…