ಡಿ.23 :- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ನಡ್ಡಿರುವ ಸಿಇಟಿ ಪರೀಕ್ಷೆ ಮೆರಿಟ್ ಮತ್ತು ಅಂತಿಮ ಆಯ್ಕೆ ಪಟ್ಟಿ ಜನೆವರಿ 27 ಕೆ ಪ್ರಕಟಿಸಲಾಗುತ್ತಿದೆ.
ಬೀದರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ ರವರಿಗೆ ಹಸ್ತಾಂತರಿಸಿರುತ್ತಾರೆ. ಸದರಿ ಅಂತಿಮ ಅಂಕ ಪಟ್ಟಿ ಮತ್ತು ಅಭ್ಯರ್ಥಿಗಳ ವಿವರಗಳನ್ನು ನೀಡಿರುತ್ತಾರೆ.
ಸ್ಪರ್ದಾತ್ಮಕ ಪರೀಕ್ಷೆಯಲ್ಲಿ ಗಳಿಕೆ ಮಾಡಿರುವ ಅಂಕಗಳ ಅನುಸಾರ ಬೀದರ ಜಿಲ್ಲೆಗೆ ಅಧಿಸೂಚನೆಯಲ್ಲಿ ನಿಗಧಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬೀದರ ಜಿಲ್ಲೆಯ ವೇಬಸೈಟ್ (https://bidar.nic.in) ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೇ ವಿವರ: 02-01-2025 ರಿಂದ 10-01-2025 ರವರೆಗೆ 1:3 ಅನುಪಾತದಲ್ಲಿನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಮತ್ತು ವಿಕಲ ಚೇತನ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವುದು ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸುವುದು.
ಹಾಗೂ ತಾತ್ಕಾಲಿಕ 1;1 ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ದಿನಾಂಕ: 15-01-2025 ರವರೆಗೆ ಪ್ರಕಟಿಸುವುದು. ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ದಿನಾಂಕ: 16-01-2025 ರಿಂದ 23-01-2025 ರವರೆಗೆ ಆಹ್ವಾನಿಸುವುದು. ಹಾಗೂ ಅಂತಿಮ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ ದಿನಾಂಕ: 27-01-2025 ರಂದು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Source : www.prajaprabhat.com
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…